ಈಶ್ವರಪ್ಪ ಕೈಬಿಡಲು ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ ಆರಂಭ
- 15 Jan 2024 , 2:14 AM
- Bengaluru
- 88
ಬೆಂಗಳೂರು : ತ್ರಿವರ್ಣ ಧ್ವಜವನ್ನು ಬದಲಿಸುತ್ತೇವೆ ಎನ್ನುವ ದೇಶದ್ರೋಹಿ ಹೇಳಿಕೆ ನೀಡಿರುವ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವಸಂಪುಟದಿಂದ ಉಚ್ಚಾಟಿಸಬೇಕೆಂದು ಆಗ್ರಹಿಸಿ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಗುರುವಾರ ಅಹೋರಾತ್ರಿ ಧರಣಿ ಆರಂಭಿಸಿದೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ ಅವರ ನಾಯಕತ್ವದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಕೈಗೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಈಶ್ವರಪ್ಪನವರ ಮೇಲೆ ಕಾನೂನು ಕ್ರಮ ಜರುಗಿಸಿ, ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಲಾಗುತ್ತಿದೆ.

ಧರಣಿಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಥೋಡ್, ವಿಧಾನ ಪರಿಷತ್ತಿನ ಬೆಳಗಾವಿ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದಾರೆ.










