ಸುಳಗಾ ಮಹಿಳೆಯರಿಂದ ಉದ್ಯೋಗ ಕಸಿದ ಪಿಡಿಒ: ತಕ್ಷಣ ಕ್ರಮಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೂಚನೆ

ಬೆಳಗಾವಿ : ತಮಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉದ್ಯೋಗ ನೀಡಲಾಗುತ್ತಿಲ್ಲ ಎಂದು ಸುಳಗಾ (ವೈ) ಗ್ರಾಮದ ನೂರಾರು ಮಹಿಳೆಯರು ಶನಿವಾರ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಬಳಿ ಬಂದು ಅಳಲನ್ನು ತೋಡಿಕೊಂಡರು.

promotions

ತಮಗೆ ಈ ವರ್ಷ ಆರಂಭದಿಂದಲೂ ನರೇಗಾ ಯೋಜನೆಯಡಿ ಉದ್ಯೋಗ ನೀಡಲಾಗುತ್ತಿಲ್ಲ. ಕೂಲಿ ಇಲ್ಲದೆ ಸಂಕಷ್ಟಕ್ಕೀಡಾಗಿದ್ದೇವೆ ಎಂದು ಮಹಿಳೆಯರು ವಿವರಿಸಿದರು. ತಕ್ಷಣ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ದೂರವಾಣಿಯಲ್ಲಿ ವಿಚಾರಿಸಿದರು.

promotions

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಯಕ್ತಿಕ ಕಾರಣಗಳಿಗಾಗಿ ಮಹಿಳೆಯರಿಗೆ ಉದ್ಯೋಗ ಖಾತ್ರಿಯಲ್ಲಿ ಉದ್ಯೋಗ ನೀಡದಿರುವ ವಿಷಯ ಬಯಲಾಯಿತು. ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಶಾಸಕಿ ಹೆಬ್ಬಾಳಕರ್ ತಕ್ಷಣವೇ ಮಹಿಳೆಯರಿಗೆ ಉದ್ಯೋಗ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು.

ಇಲ್ಲವಾದಲ್ಲಿ ನಿಮ್ಮ ವಿರುದ್ಧವೇ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎನ್ನುವ ಎಚ್ಚರಿಕೆ ನೀಡಿದರು. ನಂತರ ಮಹಿಳೆಯರಿಗೆ ಧೈರ್ಯ ತುಂಬಿದ ಶಾಸಕಿ, ಇನ್ನು ಮುಂದೆ ನಿಮಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ. ಯಾವುದೇ ಸಮಸ್ಯೆ ಬಂದರೂ ನಿಮ್ಮೊಂದಿಗೆ ನಾನಿದ್ದೇನೆ ಎಂದು ಭರವಸೆ ನೀಡಿದರು.

Read More Articles