ರಾಜ್ಯಕ್ಕೆ ಇನ್ನಷ್ಟು ನೆರವು ಒದಗಿಸಲು ಮನವಿ:ಸಚಿವ ಸಿ.ಸಿ.ಪಾಟೀಲ

ಬೆಳಗಾವಿ: ಲೋಕೋಪಯೋಗಿ ಇಲಾಖೆಯ ಸಚಿವ ಸಿ.ಸಿ.ಪಾಟೀಲ ಮಾತನಾಡಿ, ಹಿಂದಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರು ದೇಶದಾದ್ಯಂತ ಹೆದ್ದಾರಿಗಳನ್ನು ನಿರ್ಮಿಸುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ಧಿಗೆ ಚಾಲನೆ ನೀಡಿದ್ದರು.

promotions

ಇಂದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಲೋಕೋಪಯೋಗಿ ಇಲಾಖೆಯ ಸಚಿವರು ಅವರ ಕನಸನ್ನು ನನಸು ಮಾಡಿದ್ದಾರೆ ಎಂದು ಹೇಳಿದರು.

promotions

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದ್ದು, ಪ್ರತಿದಿನ 70 ಕಿ.ಮೀ. ಹೆದ್ದಾರಿ ನಿರ್ಮಾಣದ ಗುರಿಯನ್ನು ಸರಕಾರ ಹೊಂದಿದೆ.

ಕರ್ನಾಟಕದ ರಾಜ್ಯದ ಹೆದ್ದಾರಿಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಕೇಂದ್ರ ಸರಕಾರವು ಇನ್ನೂ ಹೆಚ್ಚಿನ ನೆರವು ನೀಡಬೇಕು ಎಂದು ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿಕೊಂಡರು

Read More Articles