ಅನುದಾನ ಸಮರ್ಪಕ ಬಳಕೆ ಮಾಡದಿದ್ದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ; ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಧಿಯಲ್ಲಿ ಸಮರ್ಪಕ ಬಳಕೆಯನ್ನು ಮಾಡದೇ ನಿರ್ಲಕ್ಷಿಸಿದರೆ ನಿಯಮಾವಳಿ ಪ್ರಕಾರ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದರು.

promotions

ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಗಳಡಿ ಇಲಾಖಾವಾರು ಒದಗಿಸಿದ ಅನುದಾನದಡಿ ಕೈಗೊಂಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಅನುದಾನ ಸಂಪೂರ್ಣ ಬಳಕೆಯಾಗದಿದ್ದರೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು.

promotions

ಅನುದಾನ ಬಳಕೆಯ ಕುರಿತು ಸಮರ್ಪಕ ಮಾಹಿತಿಯನ್ನೂ ನೀಡದ ಹಾಗೂ ಸಭೆಗೆ ಗೈರು ಹಾಜರಾದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ಇದಲ್ಲದೇ ಸಭೆಗೆ ಬಾರದ ಅಧಿಕಾರಿಗಳ ಕುರಿತು ಸಚಿವಾಲಯಕ್ಕೆ ಮಾಹಿತಿಯನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಆರ್.ಸಿ.ಯು./ವಿಟಿಯು ಹಾಗೂ ಬಿಮ್ಸ್ ನಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಅಗತ್ಯ ಪುಸ್ತಕಗಳು ಸೇರಿದಂತೆ ಅಗತ್ಯ ಶೈಕ್ಷಣಿಕ ಸಲಕರಣೆಗಳನ್ನು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ವಿತರಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ನಿಗದಿತ ಗುರಿ ಸಾಧಿಸದ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆದುಕೊಳ್ಳಬೇಕು.ಒಂದು ವೇಳೆ ನಿಗದಿತ ಪ್ರಗತಿ ಸಾಧಿಸದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು. ಮಾರ್ಚ್ ಮಾಹೆಯವರೆಗೆ ಕಾಯದೇ ಆಯಾ ತಿಂಗಳಿನಲ್ಲಿಯೇ ಖರ್ಚು ಮಾಡಬೇಕು.

ನಿಗದಿತ ಸಮಯದಲ್ಲಿ ಅನುದಾನವನ್ನು ಖರ್ಚು ಮಾಡದಿದ್ದರೆ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಲು ಕಾಯ್ದೆಯಲ್ಲಿ ಅವಕಾಶಗಳಿವೆ. ಟೆಂಡರ್ ಪ್ರಕ್ರಿಯೆ ನಡೆಸಲು ಸಮಯಾವಕಾಶ ಇಲ್ಲದಿರುವುದರಿಂದ ಸರಕಾರ ನಿಗದಿಪಡಿಸಿದ ಸಂಸ್ಥೆಗಳಿAದ ನಿಯಮಾನುಸಾರ ಖರೀದಿ ಪ್ರಕ್ರಿಯೆ ನಡೆಸುವ ಮೂಲಕ ಮಾರ್ಚ್ ಅಂತ್ಯದೊಳಗೆ ಸಂಪೂರ್ಣ ಅನುದಾನ ಬಳಕೆ ಮಾಡಿಕೊಂಡು ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ ನೀಡಿದರು.

ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಪಾಲಿನ ಹಣವನ್ನು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಭರಿಸುವ ಬಗ್ಗೆ ಪರಿಶೀಲಿಸಬಹುದು. ಅನುದಾನ ಬಿಡುಗಡೆಯಾದ ಬಳಿಕವೂ ಸಮರ್ಪಕವಾಗಿ ಅನುದಾನ ಬಳಕೆ ಮಾಡದಿದ್ದರೆ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಅನುದಾನ ಹಂಚಿಕೆ ಮತ್ತು ಬಳಕೆಯ ಕುರಿತು ತಾಲ್ಲೂಕು ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಬೇಕಿರುವುದರಿಂದ ಆಯಾ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಮತ್ತು ಸೂಕ್ತ ನಿರ್ದೇಶನವನ್ನು ನೀಡಬೇಕು ಎಂದು ಸಭೆಯಲ್ಲಿ ತಿಳಿಸಿದರು.

ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆಯಡಿ ನಿಗದಿ ಪಡಿಸಿದ ಶೇಕಡವಾರು ಶೆ.64% ರಲ್ಲಿ 59.87 ರಷ್ಟು ಪ್ರಗತಿ ಸಾಧಿಸಿದೆ. ಪರಿಶಿಷ್ಟ ಜಾತಿ, ಗಿರಿಜನ ಉಪಯೋಜನೆಯಡಿ ಶೇ. 81.53 ರಲ್ಲಿ, ಶೇ. 78.58 ರಷ್ಟು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬಸವರಾಜ ವರವಟ್ಟಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Read More Articles