ಯುಪಿಎಸ್‌ಸಿ ಪರೀಕ್ಷೆಯಲ್ಲಿ 532ನೇ ರ್ಯಾಂಕ್ ಪಡೆದ ರೈತನ ಪುತ್ರ

ಬೆಳಗಾವಿ: ಹುಕ್ಕೇರಿ ತಾಲೂಕಿನ ಪ್ರಫುಲ್ ದೇಸಾಯಿ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ 532‌ ನೇ ರ್ಯಾಂಕ್ ಪಡೆಯುವ ಮೂಲಕ ಇಡೀ ಬೆಳಗಾವಿ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ . ಯರನಾಳ ಗ್ರಾಮದ ರೈತಾಪಿ ಕುಟುಂಬ ದಲ್ಲಿ ಜನಿಸಿದ ಇವರ ತಂದೆ ಕೆಂಪಣ್ಣ ದೇಸಾಯಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದರು ಈಗ ಮಗನ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

promotions

ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವ ಗ್ರಾಮದಲ್ಲಿ ಕಲತು ಪಿಯುಸಿ ಸಂಕೇಶ್ವರ ದಲ್ಲಿ ಮುಗಸಿದ್ದಾರೆ.ಹುಬ್ಬಳ್ಳಿಯಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದು ಕನ್ನಡ ಮಾಧ್ಯಮದಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಹಳ್ಳಿ ಯುವಕರಿಗೆ ಮಾದರಿ ಯಾಗಿದ್ದಾರೆ.

promotions

Read More Articles