ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ ಸಿದ್ಧಾಂತ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

ಗೋಕಾಕ: ಬಡವರನ್ನು ಬಡವರಾಗಿಯೇ ಮಾಡುವುದೇ ಬಿಜೆಪಿ ಸಿದ್ಧಾಂತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

promotions

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಜನ ಸಾಮಾನ್ಯರಿಗೆ ತೊಂದರೆ ಆಗುತ್ತಿದೆ. ಆದರೆ ಜನರ ಸಮಸ್ಯೆಗೆ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸ್ಪಂದಿಸಲ್ಲ ಎಂದು ಆರೋಪಿಸಿದರು.

promotions

ಕೆಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬೆಂಗಳೂರಿಗೆ ಬಂದಿದ್ದರು. ಪಕ್ಷ ಸಂಘಟನೆ ಬಗ್ಗೆ ಅವರೊಂದಿಗೆ ಚರ್ಚಿಸಲಾಗಿದೆ. ಪ್ರಸ್ತುತ ದಿನಗಳಲ್ಲಿ ಎಲ್ಲ ಕಾಂಗ್ರೆಸ್‌ ಕಾರ್ಯಕರ್ತರಿಗೆ ತರಬೇತಿ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಪದವಿಧರರ ಮತ್ತು ಶಿಕ್ಷಕರ ಮತಕ್ಷೇತ್ರದ ಚುನಾವಣೆಗೆ ಅಧಿಕೃತ ಅಭ್ಯರ್ಥಿಗಳನ್ನು ಇನ್ನೂ ಘೋಷಣೆ ಮಾಡಿಲ್ಲ. ರಾಜ್ಯ ನಾಯಕರೊಂದಿಗೆ ಚರ್ಚಿಸಿ ಆದಷ್ಟು ಬೇಗ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.

Read More Articles