ಶ್ರೇಷ್ಠ ಕೃಷಿಕ’ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ ಪ್ರಕಟಣೆ

ಚಿಕ್ಕೋಡಿ: ಆತ್ಮ‌ನಿರ್ಭರ ಭಾರತ ಯೋಜನೆಯ ಅಡಿಯಲ್ಲಿ, 2020-21 ನೇ ಸಾಲಿನ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಕೃಷಿ, ಮೀನುಗಾರಿಕೆ, ಕೃಷಿ ಯಾಂತ್ರೀಕರಣ, ಸೌರ ವಿದ್ಯುತ್ ಅಳವಡಿಕೆ ಮುಂತಾದ ಕ್ಷೇತ್ರಗಳಲ್ಲಿ ವಿಶೇಷ ಸಾಧನೆಗೈದ ರೈತರಿಗೆ ತಾಲೂಕಾ ಮಟ್ಟದಲ್ಲಿ, ಪ್ರತಿ ತಾಲೂಕಿನಲ್ಲಿ 05 ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ಒಟ್ಟು 10 ಜನ ರೈತರಿಗೆ ‘ಶ್ರೇಷ್ಠ ಕೃಷಿಕ’ ಪ್ರಶಸ್ತಿಗಳಿಗಾಗಿ, ಮತ್ತು ಜಿಲ್ಲಾ ಮಟ್ಟದಲ್ಲಿ ಒಟ್ಟು 5 ಶ್ರೇಷ್ಠ ಆಸಕ್ತ ರೈತರ ಗುಂಪುಗಳ ಪ್ರಶಸ್ತಿಗಳಿಗಾಗಿ ಅರ್ಜಿಗಳನ್ನು ಕರೆದಿದ್ದು, ಆಸಕ್ತ ರೈತರು ಅರ್ಜಿ ನಮೂನೆಯನ್ನು ಸಂಬಂಧಪಟ್ಟ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆಯಬಹುದಾಗಿ ಈಗಾಗಲೇ ಸರ್ಕಾರದಿಂದಾಗಲೀ ಅಥವಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಂದಾಗಲೀ ಮೇಲ್ಕಾಣಿಸಿದ ವಿಷಯಗಳಲ್ಲಿ ಸಮನಾದ ಪ್ರಶಸ್ತಿಗಳನ್ನ ಪಡೆದ ರೈತರು ಹಾಗೂ ಅವರ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

promotions

ತಾಲೂಕಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತ ಒಂದೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲು ತಿಳಿಸಲಾಗಿದೆ. . ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 31-08-2020 ಸಾಯಂಕಾಲ 5.00 ಗಂಟೆ ರೊಳಗಾಗಿ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದು. ಹೆಚ್ಚಿನ ಮಾಹಿತಿಗಾಗಿ ಸಹಾಯ ವಾಣಿ ಸಂಖ್ಯೆ 8310361859 ಗೆ ಸಂಪರ್ಕಿಸುಂತೆ ಇಲಾಖೆ ತಿಳಿಸಿದೆ.

promotions

Read More Articles