ಖಾಸಗಿ ಮಾರುಕಟ್ಟೆಯ ಎಫ್ಐಆರ್ ತನಿಖೆ ಚುರುಕುಗೊಳಿಸಿ: ಮೊದಗಿ

ಬೆಳಗಾವಿ: ನ್ಯಾಯಾಲಯದ ಸೂಚನೆಯ ಮೆರೆಗೆ ಖಾಸಗಿ ಮಾರುಕಟ್ಟೆ ನಿರ್ಮಾಣ‌‌ ಮಾಡಲು‌ ಸಹಕಾರ ಮಾಡಿದ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ತ‌ನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹೇಳಿದರು.

promotions

ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

promotions

ಖಾಸಗಿ ಮಾರುಕಟ್ಟೆ ನಿರ್ಮಾಣ‌‌ ಮಾಡಲು ಸಹಕಾರ ನೀಡಿದ ಅಂದಿನ ಜಿಲ್ಲಾಧಿಕಾರಿ ಎನ್.‌ಜಯರಾಮ್, ಬುಡಾ ಆಯುಕ್ತ, ತಹಶಿಲ್ದಾರ ಪ್ರೀತಂ ನಸಲಾಪುರೆ, ಮೇಲೆ ಏ.26 ರಂದು ಮಾಳಮಾರುತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

ಸರಕಾರದ ಸಂಸ್ಥೆಯಾದ ಎಪಿಎಂಸಿ ಖಾಸಗಿ ಮಾರುಕಟ್ಟೆ ಮುಂದೆ ಮಂಡಿಯೂರಿದೆ. ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವುದನ್ನು ಬಂದ್ ಮಾಡಿಸುವಂತೆ 75 ದಿನಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಯಾವುದು ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಪಿಎಂಸಿ ಕಚೇರಿಯ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಕುಳಿತ ವೇಳೆ ಜಿಲ್ಲಾಧಿಕಾರಿ ಸಮಿತಿ ರಚನೆ ಮಾಡಿ ತನಿಖೆ ಮಾಡುವುದಾಗಿ ಹೇಳಿ ಇಲ್ಲಿಯವರೆ ಅದು ಏನಾಗಿದೆ ಎಂದು ಸ್ಪಷ್ಟವಾಗಿಲ್ಲ ಎಂದರು.

ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ‌ಟೋಪಣ್ಣವರ ಮಾತನಾಡಿ, ಸಿದ್ದಲಿಂಗಪ್ಪ ಬಾವಿ 2011ರಲ್ಲಿ ಮೃತಪಟ್ಟ ವ್ಯಕ್ತಿಯ ಹೆಸರಿನ ಮೇಲೆ ಭೂ ಪರಿವರ್ತನೆ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಜೈ ಕಿಸಾನ್ ತರಕಾರಿ ಮಾರುಕಟ್ಟೆ ನಿರ್ಮಾಣ ಮಾಡಲು ಎನ್ ಎ ಲೇಔಟ್ ಗೆ ಅರ್ಜಿ ಸಲ್ಲಿಸಿದ್ದರು ಎಂದರು. ಖಾಸಗಿ ಮಾರುಕಟ್ಟೆ ನಿರ್ಮಾಣ ಮಾಡಲು ಅಧಿಕಾರಿಗಳು ಹಾಗೂ ಸರಕಾರ ಸಹಕಾರ ಮಾಡಿದೆ. ಪ್ರಕರಣ ದಾಖಲಾದ ಅಧಿಕಾರಿಗಳ ಮೇಲೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ‌ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಶಂಕರ ಹೆಗಡೆ, ಶಿವಲೀಲಾ‌ ಮಿಸಾಳೆ, ಸತೀಶ ಪಾಟೀಲ ಉಪಸ್ಥಿತರಿದ್ದರು.

Read More Articles