1995ರ ಅನುದಾನ ರಹಿತ ಶಾಲಾ, ಕಾಲೇಜುಗಳಿಗೆ ವೇತನ ಅನುದಾನಕ್ಕೆ ಒಳಪಡಿಸಬೇಕೆಂದು ಒತ್ತಾಯ

ಬೆಳಗಾವಿ: 1995ರ ನಂತರದ ಅನುದಾನ ರಹಿತ ಶಾಲಾ, ಕಾಲೇಜುಗಳನ್ನು ವೇತನ ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ,ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

promotions

1995ರ ಬಳಿಕ ಅವಿಚ್ಚಿನ್ನವಾಗಿ ನಡೆಸುತ್ತಿರುವ ಖಾಸಗಿ ಅನುದಾನ ರಹಿತ ಶಾಲಾ, ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂದು ಹಲವಾರು ಬಾರಿ ಹೋರಾಟ ಮಾಡಿದರೂ ಪ್ರಯೋಜನವಾಗಿಲ್ಲ. ಕಡಿಮೆ ವೇತನದಲ್ಲಿ ಖಾಸಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರ ಬದುಕು ಮೂರಾಬಟ್ಟೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

promotions

ಕಳೆದ ಸರಕಾರಗಳು 1987 ರಿಂದ 1995ರ ವರೆಗಿನ ಮೂರು ಸಾವಿರಕ್ಕೂ ಅಧಿಕ ಶಾಲಾ, ಕಾಲೇಜುಗಳನ್ನು ಅನುದಾನಕ್ಕೊಳಪಡಿಸಿ, ಶಿಕ್ಷಕರ ಬದುಕನ್ನು ಹಸನಾಗಿಸಿವೆ. ಈ ವಿಷಯಕ್ಕಾಗಿ ಸರಕಾರಕ್ಕೆ ಸಾಕಷ್ಟು ಬಾರಿ ವಿನಂತಿಸಿಕೊಂಡರೂ ಅನುದಾನ ನೀಡುವ ಬಗ್ಗೆ ಗಮನ ಹರಿಸಿಲ್ಲ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರಕಾರ ಕೂಡಲೆ ಸಾವಿರಾರು ಶಿಕ್ಷಕರ, ಲಕ್ಷಾಂತರ ಮಕ್ಕಳ ಬದುಕಿಗೆ ಆಸರೆಯಾಗುವ, ಕನ್ನಡ ನಾಡಿನಲ್ಲಿ ಕನ್ನಡ ಮಾಧ್ಯಮ ಶಾಲಾ, ಕಾಲೇಜುಗಳ ಉಳಿವಿಗಾಗಿ 1995ರ ನಂತರ ಪ್ರಾರಂಭವಾದ ಶಾಲೆಗಳಿಗೆ ವೇತನ ಅನುದಾನ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Read More Articles