ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟ : ವದಂತಿಗೆ ತೆರೆ ಎಳೆದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
- 14 Jan 2024 , 10:02 PM
- Bengaluru
- 101
ಬೆಂಗಳೂರು : ಕೊರೋನಾ ಮಹಾಮಾರಿ ಹಿನ್ನೆಲೆ ರಾಜ್ಯದಲ್ಲಿ ಗೊಂದಲಮಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಿರುವ ರಾಜ್ಯ ಸರ್ಕಾರ ಈಗ ಫಲಿತಾಂಶ ಪ್ರಕಟಿಸುವ ವಿಷಯದಲ್ಲೂ ಗೊಂದಲಕ್ಕೀಡಾಗಿದೆ.ಆಗಸ್ಟ್ 7 ರಂದು ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಸುದ್ದಿ ಹರಡಿದ್ದು , ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ 7 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ , ಇನ್ನೂ ಫಲಿತಾಂಶ ಪ್ರಕಟ ಮಾಡಲು ಇನ್ನೂ ದಿನಾಂಕ ನಿಶ್ಚಯವಾಗಿಲ್ಲ . ಫಲಿತಾಂಶ ಪ್ರಕಟನೆಯ ಬಗ್ಗೆ ಅಧಿಕೃತವಾಗಿ ಶಿಕ್ಷಣ ಇಲಾಖೆ ಸಮಗ್ರ ಮಾಹಿತಿಯನ್ನು ಕೊಡಲಿದೆ. ಎಂದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಳ್ಳುವ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ. ಹೀಗಾಗಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟದ ಸುದ್ದಿ ಸುಳ್ಳು ಎಂದಿದ್ದಾರೆ.











