ಶಸ್ತ್ರಾಸ್ತ್ರ ಠೇವಣಿಗೆ ಡಿಸಿ ಪಾಟೀಲ್ ಆದೇಶ

ಬೆಳಗಾವಿ: ಚುನಾವಣೆಯ ಹಿನ್ನೆಲೆಯಲ್ಲಿ ಆಯುಧ ಲೈಸೆನ್ಸುದಾರರು ಆಯುಧಗಳು/ ಶಸ್ತ್ರಾಸ್ತ್ರಗಳನ್ನು ಜೊತೆಗಿಟ್ಟುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. ಲೈಸೆನ್ಸುದಾರರು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಆಯುಧ/ಶಸ್ತ್ರಾಸ್ತ್ರಗಳನ್ನು ಮೇ 18ರೊಳಗಾಗಿ ಠೇವಣಿ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

promotions

ಆಯುಧಗಳನ್ನು ಠೇವಣಿ ಮಾಡಿದ ಬಗ್ಗೆ ಅಗತ್ಯ ಸ್ವೀಕೃತಿ ಪತ್ರ ನೀಡಲು ಮತ್ತು ಚುನಾವಣೆ ಫಲಿತಾಂಶ ಹೊರಬಿದ್ದ ಒಂದು ವಾರದ ನಂತರ ಆಯುಧಗಳನ್ನು ಸಂಬಂಧಿಸಿದವರಿಗೆ ವಾಪಸ್ ನೀಡಲು ಅಗತ್ಯ ಕ್ರಮ ತೆಗೆದುಕೊಳ್ಳಲು ಪೊಲೀಸ್ ಆಯುಕ್ತರು, ಹೆಚ್ಚುವರಿ ಜಿಲ್ಲಾ ದಂಡಾಧಿಗಳು, ಮಹಾನಗರ ಪಾಲಿಕೆ, ಹಾಗೂ ಆರಕ್ಷಕ ಅಧೀಕ್ಷಕರಿಗೆ ನಿರ್ದೇಶನ ನೀಡಿದ್ದಾರೆ.

promotions

ಈ ಆದೇಶವು ಸರ್ಕಾರಿ ಸೇವೆಯಲ್ಲಿ ನಿರತರಾಗಿರುವ ಅಧಿಕಾರಿ, ಸಿಬ್ಬಂದಿಗೆ ಅನ್ವಯಿಸುವುದಿಲ್ಲ. ಬ್ಯಾಂಕ್ ಹಾಗೂ ಇನ್ನಿತರ ರಾಷ್ಟ್ರೀಕೃತ ಅಥವ ಖಾಸಗಿ ಸಂಸ್ಥೆಗಳ ಸುರಕ್ಷತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆ ಅನ್ವಯಿಸುವುದಿಲ್ಲ.

ಈ ಆದೇಶವನ್ನು ಉಲ್ಲಂಘಿಸಿದವರನ್ನು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ಕಾಯ್ದೆ 1973 ಹಾಗೂ ಪ್ರಜಾ ಪ್ರತಿನಿಧಿ ಕಾಯ್ದೆ 1951ರ ಅಡಿ ದಂಡನೆಗೆ ಗುರಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More Articles