ಬೆಳಗಾವಿಗೆ ಏಮ್ಸ್ ನೀಡುವಂತೆ ಕಿತ್ತೂರು ಆಪ್ ಒತ್ತಾಯ
- 15 Jan 2024 , 1:54 AM
- Belagavi
- 119

ಬೆಂಗಳೂರು ಹೊರತು ಪಡೆಸಿದರೆ ಬೆಳಗಾವಿ ಜಿಲ್ಲೆ ಹೆಚ್ಚು ಜನಸಂಖ್ಯೆ ಹೊಂದಿದೆ. ಬೆಳಗಾವಿಯಲ್ಲಿ ಎಲ್ಲ ಸೌಕರ್ಯ ಇದ್ದರೂ ಕಡಿಮೆ ಜನಸಂಖ್ಯೆ ಇರುವ ನೆರೆಯ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಸೌಲಭ್ಯ ನೀಡುತ್ತಿರುವುದು ಸರಿಯಲ್ಲ.

ಈಗಾಗಲೇ ನೆರೆಯ ಜಿಲ್ಲೆಗೆ ಸುಸಜ್ಜಿತವಾದ ಹಾಸಿಗೆಯಳ್ಳ ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಸರ್ಕಾರ ನೀಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದು ಹೆಗ್ಗಳಿಕೆ ಪಾತ್ರವಾಗಿದ್ದರೂ, ಸರ್ಕಾರ ಅಭಿವೃದ್ಧಿ ಪಡಿಸುವಲ್ಲಿ ವಿಫಲವಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಳಗಾವಿಯಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಯೋಜನೆ ಜಾರಿಗೆ ತಂದರೂ ಇಲ್ಲಿಯವರೆಗೆ ಕಟ್ಟಡ ಕಾಮಗಾರಿ ಪೂರ್ಣಗೊಂಡಿಲ್ಲ ಕಡಿಮೆ ಜನಸಂಖ್ಯೆ ಇರುವ ನೆರೆಯ ಜಿಲ್ಲೆಗೆ ಸರ್ಕಾರ ವೈದ್ಯಕೀಯ ಸೌಲಭ್ಯ ನೀಡಿ, ಹೆಚ್ಚು ಜನಸಂಖ್ಯೆ ಇರುವ ಬೆಳಗಾವಿ ಜಿಲ್ಲೆಯನ್ನು ಕಡೆಗಣನೆ ಮಾಡುವುದು ಸೂಕ್ತವಲ್ಲ.
ಕೂಡಲೇ ಸರ್ಕಾರ ಬೆಳಗಾವಿ ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದರೆ. ಆನಂದ ಹಂಪಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.










