ಗಂಗಣ್ಣ ಕಲ್ಲೂರ್ ಅವರಿಗೆ ಮಾತೃ ವಿಯೋಗ
- 14 Jan 2024 , 10:53 PM
- Belagavi
- 117
ಬೆಳಗಾವಿ : ಬೈಲಹೊಂಗಲ ತಾಲೂಕಿನ ಪ್ರತಿಷ್ಠಿತ ಕಲ್ಲೂರು ಮನೆತನದ ಶಿವಲೀಲಾ ಗುರುಸಿದ್ದಪ್ಪ ಕಲ್ಲೂರು ಮಂಗಳವಾರ ಮುಂಜಾನೆ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಬೆಳಗಾವಿಯ ಹನುಮಾನ್ ನಗರದ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು.

ಮೂಲತಃ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ನಿವಾಸಿಯಾಗಿರುವ ಶಿವಲೀಲಾ ಅವರು, ರಿಯಲ್ ಎಸ್ಟೇಟ್ ಉದ್ಯಮಿ, ಮೋದಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಂಗಣ್ಣಾ ಕಲ್ಲೂರ್ ಅವರ ಮಾತೋಶ್ರೀ.

ಗಂಗಣ್ಣಾ ಕಲ್ಲೂರು ಸೇರಿದಂತೆ ಇಬ್ಬರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ನಾವಲಗಟ್ಟಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಶಿವಲೀಲಾ ಕಲ್ಲೂರ ಅವರ ನಿಧನಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾರ ಸಂತಾಪ ವ್ಯಕ್ತಪಡಿಸಿದ್ದಾರೆ.










