ಬಿಜೆಪಿ ಸರ್ಕಾರದ್ ಮೇಲೆ ಟ್ವಿಟ್ ಮೂಲಕ್ ಹರಿಹಾಯ್ದ್ ಕಾಂಗ್ರೆಸ್ ಮುಖಂಡರಾದ್ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ

ದೇಶದಲ್ಲಿ ನಡೆಯುತ್ತಿರುವ ಗಲಭೆ ಮತ್ತು ಹೊಸ ಕಾನೂನುಗಳನ್ನು ಮಂದಿಟ್ಟುಕೊಂಡು ಕಾಂಗ್ರೆಸ್ ಮುಖಂಡರಾದ್ ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಬಿಜೆಪಿ ಸರ್ಕಾರದ್ ಮೇಲೆ ಹರಿಹಾಯ್ದಿದ್ದಾರೆ.

promotions

ಅಗ್ನಿಪಥ ಸ್ಕಿಮ್ನನಿಂದ್ ಯುವ ಜನಾಂಗ್ ಬೀದಿಗೆ ಇಳಿದಿದ್ದು ಇದರ ವಿರುದ್ದ ಧ್ವನಿ ಎತ್ತಿದ್ದಾರೆ.
ಕೃಷಿಕಾನೂನಿನ ವಿರುದ್ದ ಇಡೀ ಭಾರತದ್ ರೈತರು ದನಿ ಎತ್ತಿದ್ದು ದೆಹಲಿ ಗಲಭೆ ಇನ್ನು ಬೂದಿ ಮುಚ್ಚಿದ್ ಕೆಂಡದಂತಿದೆ.

promotions

ಅಗ್ನಿಪಥ್ - ಯುವಕರು ತಿರಸ್ಕರಿಸಿದ್ದಾರೆ
ಕೃಷಿ ಕಾನೂನು - ರೈತರು ತಿರಸ್ಕರಿಸಿದ್ದಾರೆ
ನೋಟು ಅಮಾನ್ಯೀಕರಣ - ಅರ್ಥಶಾಸ್ತ್ರಜ್ಞರು ನಿರಾಕರಿಸಿದ್ದಾರೆ
GST - ವ್ಯಾಪಾರಿಗಳು ತಿರಸ್ಕರಿಸಿದ್ದಾರೆ
ದೇಶದ ಜನತೆಗೆ ಏನು ಬೇಕು ಎಂಬುದು ಪ್ರಧಾನಿಗೆ ಅರ್ಥವಾಗುತ್ತಿಲ್ಲ ಏಕೆಂದರೆ ಅವರ ‘ಸ್ನೇಹಿತರ’ ದನಿ ಬಿಟ್ಟು ಬೇರೇನೂ ಕೇಳುವುದಿಲ್ಲ.

ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ ? ಪ್ರಶ್ನಿಸಿದ್ದಾರೆ.

ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?

ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?

ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ @BJP4India ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ

ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!

ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು ಎಂದು ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.

Read More Articles