ವಿಧಾನಸಭೆ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ?ಯಾರಿಗೆ ಗೇಟ್ ಪಾಸ್ ?

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಿಕೊಂಡು ಬಂದಿರುವ ಬೆಳಗಾವಿಯಲ್ಲಿ ಈಗ 2023ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ತೆರೆ ಮರೆಯ ಕಸರತ್ತು ಆರಂಭಿಸಿದ್ದರೇ, ಮಾಜಿ ಶಾಸಕರಿಗೆ ಟಿಕೆಟ್ ಸಿಗುತ್ತದೆಯೋ ಇಲ್ಲವೋ ಎಂಬುವ ಗೊಂದಲದಲ್ಲಿದ್ದರೆ, ಹಾಲಿ ಶಾಸಕರು ಶತಾಯ ಗತಾಯ ಕ್ಷೇತ್ರ ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು ಆರಂಬಿಸಿದ್ದಾರೆ.

promotions

ಬೆಳಗಾವಿ ಜಿಲ್ಲೆಯಲ್ಲಿ 18 ವಿಧಾನ ಸಭಾ ಕ್ಷೇತ್ರಗಳಿವೆ. ಈ ಪೈಕಿ ಈಗಾಗಲೇ ರಾಮದುರ್ಗ, ಬೆಳಗಾವಿ ಉತ್ತರ, ಬೈಲಹೊಂಗಲ, ಬೆಳಗಾವಿ ಗ್ರಾಮೀಣ, ಖಾನಾಪುರ, ಯಮಕನಮರಡಿ ಮತಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಬದಲಾಗುತ್ತಾರೆ ಎನ್ನುವ ಚರ್ಚೆಗಳು ಜೋರಾಗಿ ನಡೆದಿವೆ. ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಫೀರೋಜ್ ಸೇಠ್ ಅವರನ್ನು ಸೋಲಿಸಿದ್ದ ಹಾಲಿ ಶಾಸಕ ಅನಿಲ್ ಬೆನಕೆಗೆ ಟಿಕೆಟ್ ತಪ್ಪುವ ಭೀತಿ ಶುರುವಾಗಿದೆ.

promotions

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಲಿಂಗಾಯತ ಬಿಜೆಪಿ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಕೂಗು ಜೋರಾಗಿ ಕೇಳಿ ಬರುತ್ತಿದೆ. ಒಂದು ವೇಳೆ ಲಿಂಗಾಯತ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೆ ಆದ್ದಲ್ಲಿ ಡಾ. ರವಿ ಪಾಟೀಲ, ಮುರುಗೇಂದ್ರಗೌಡ ಪಾಟೀಲ, ವೀರೇಶ ಕಿವಡಸಣ್ಣವರ, ಸದಾನಂದ ಗುಂಟೇಪ್ಪನವರ ಹೆಸರು ಮುನ್ನಲೆಗೆ ಬರುತ್ತಿದೆ. ಮರಾಠಾ ಸಮುದಾಯದ ಅಭ್ಯರ್ಥಿಗೆ ನೀಡಿದರೇ ಹಾಲಿ ಶಾಸಕ ಅನಿಲ್ ಬೆನಕೆ ಅವರಿಗೆ ಟಿಕೆಟ್ ಖಾತ್ರಿಯಾಗಬಹುದು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸಂಜಯ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಹಾಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಸೋಲು ಕಂಡಿದ್ದರು. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಸಂಜಯ ಪಾಟೀಲ ಹೆಸರು ಕೇಳಿ ಬಂದಿತ್ತು ಆದರೂ ಟಿಕೆಟ್ ಸಿಗಲಿಲ್ಲ. ಹಾಲಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷರಾಗಿರುವ ಸಂಜಯ ಪಾಟೀಲ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಗ್ರಾಮೀಣ ಭಾಗದಲ್ಲಿ ಜನರ ನಿಕಟ ಸಂಕರ್ಪ ಹೊಂದಿರುವ ಬಿಜೆಪಿ ಮುಖಂಡ ಧನಂಜಯ ಜಾಧವ, ಇಲ್ಲವೆ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದರೂ ಅಶ್ಚರಿ ಪಡಬೇಕಿಲ್ಲ. ಖಾನಾಪುರ ಮತಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್‌ನ ಅಂಜಲಿ ನಿಂಬಾಳಕರ ಗೆಲವು ಸಾಧಿಸಿದ್ದರು. ಅವರ ಎದುರು ಈಗ ಬಿಜೆಪಿಯಿಂದ ಡಾ. ಸೋನಾಲಿ ಸರ್ನೋಬತ್, ಮಾಜಿ ಎಂಇಎಸ್ ಶಾಸಕ ಈಗ ಬಿಜೆಪಿ ಸೇರ್ಪಡೆಯಾಗಿರುವ ಅರವಿಂದ ಪಾಟೀಲ, ವಿಠ್ಠಲ್ ಹಲಗೇಕರ ಹೆಸರು ಮುನ್ನಲೆಗೆ ಬರುತ್ತಿದೆ.

ಯಮಕನಮರಡಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸತೀಶ ಜಾರಕಿಹೊಳಿ ಅವರ ವಿರುದ್ಧ ಸೋಲು ಕಂಡಿದ್ದ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ಈಗ ನಿಗಮಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಸಿಗುವುದು ಅನುಮಾನ. ಹೊಸ ವ್ಯಕ್ತಿಯ ಹುಡುಕಾಟದಲ್ಲಿ ಬಿಜೆಪಿ ಸಿದ್ಧತೆ ನಡೆಸಿದೆ.

ರಾಮದುರ್ಗ ಮತಕ್ಷೇತ್ರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಶೋಕ ಪಟ್ಟಣ ಅವರ ವಿರುದ್ಧ ಗೆಲವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಮಹದೇವಪ್ಪ ಯಾದವಾಡ ಅವರಿಗೆ ವಯಸ್ಸಿನ ಕಾರಣ ಟಿಕೆಟ್ ತಪ್ಪುವ ಭೀತಿ ಇದೆ. ಇವರ ಬದಲಾಗಿ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ದೇಶಪಾಂಡೆ, ಮಲ್ಲಪ್ಪ ಯಾದವಾಡ ಇಲ್ಲ ಹೊಸ ಮುಖಕ್ಕೆ ಮಣೆ ಹಾಕಿದರೂ ಆಶ್ಚರಿ ಪಡೆಬೇಕಿಲ್ಲ.

ಬೆಳಗಾವಿ ವಿಧಾನಸಭಾ ಚುನಾವಣೆ ಇನ್ನೂ ಏಳೆಂಟು ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳು ಪಕ್ಷದ ಮುಖಂಡರನ್ನು ಮನವೊಲಿಸಲು ನಾನಾರೀತಿಯ ಕಸರತ್ತು ನಡೆಸಿದ್ದಾರೆ. ಟಿಕೆಟ್ ಹಂಚಿಕೆಯಲ್ಲಿ ವಿಷಯದಲ್ಲಿ ಹೈಕಮಾಂಡ್ ನಿರ್ಣಯವೇ ಅಂತಿಮ.

Read More Articles