
ನಾಳೆಯಿಂದ ನಿಷೇಧಾಜ್ಞೆ ಜಾರಿ: ಬೋರಲಿಂಗಯ್ಯ
- 14 Jan 2024 , 5:18 PM
- Belagavi
- 81
ಬೆಳಗಾವಿ: ಬೆಳಗಾವಿ ನಗರದ ಒಟ್ಟು. 02 ಕೇಂದ್ರಗಳಲ್ಲಿ ಆಗಸ್ಟ್ 01 ರಿಂದ 08 ರವರೆಗೆ ಗಣಕಯಂತ್ರ ಥಿಯರಿ ಮತ್ತು ಪ್ರಾಯೋಗಿಕ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ಸ್ಮತ್ತಲೂ 144 ಸೆಕ್ಷನ್ ಅಡಿ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ.

ಶ್ರೀ ಸಿದ್ದರಾಮೇಶ್ವರ ಪ.ಪು ಕಾಲೇಜು ಶಿವ ಬಸವ ನಗರ, ಬೆಳಗಾವಿ ಕೇಂದ್ರದಲ್ಲಿ ಆಗಸ್ಟ್ 01 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 2 ಗಂಟೆಯಯವರೆಗೆ ಆರ್. ಎನ್. ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜು ಬೆಳಗಾವಿ ಕೇಂದ್ರದಲ್ಲಿ ಆಗಸ್ಟ್ 02 ರಿಂದ 08 ರವರೆಗೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ 5.30ರವರೆಗೆ ಪರೀಕ್ಷೆಗಳು ನಡೆಯಲಿವೆ.

ಈ ಆಜ್ಞೆಯು ಅಂತ್ಯಕ್ರಿಯೆ ಮೆರವಣಿಗೆಗಳಿಗೆ ಮತ್ತು ಇನ್ನಿತರ ಕಾರಣಗಳಿಗಾಗಿ ಅನುಮತಿ ಪಡೆದು ತೆಗೆಯಿಸಲಾದ ಮೆರವಣಿಗೆಗಳಿಗೆ ಅನ್ವಯಿಸುವದಿಲ್ಲ. ಸದರಿ ಆಜ್ಞೆಯನ್ನು ಉಲ್ಲಂಘಿಸುವವರ ವಿರುದ್ದ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮವನ್ನು ಜರುಗಿಸಲು ಸಂಬಂಧಪಟ್ಟ ಪಿ.ಐ ರವರಿಗೆ ಅನುಮತಿ ನೀಡಲಾಗಿದೆ.
ಈ ನಿಷೇಧಾಜ್ಞೆಯನ್ನು ಈ ದಿವಸ ಅಂದರೆ ದಿನಾಂಕ:30/07/2022 ರಂದು ನನ್ನ ಹಸ್ತಾಕ್ಷರ ಹಾಗೂ ಮುದ್ರೆಯೊಂದಿಗೆ ಹೊರಡಿಸಲಾಗಿದೆ. ಪರೀಕ್ಷಾ ಕೇಂದಗಳ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಗುಂಪು-ಗುಂಪಾಗಿ ಸೇರುವದನ್ನು ನಿಷೇಧಿಸಿ ಆದೇಶವನ್ನು ಹೊರಡಿಸಲಾಗಿದೆ.
ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಶಸ್ತç, ಬಡಿಗೆ, ಬರ್ಚಿ, ಖಡ್ಗ, ಗಧೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕೂ ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಲು ಉಪಯೋಗಿಸಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವದನ್ನು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ ನಿಷೇಧಾಜ್ಞೆಯ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲು ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮೇಲೆ ವಿವರಿಸಿದ ಮಾರಕಾಸ್ತ್ರಾಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ.
ಅಂಥಹ ಮಾರಕಾಸ್ತçಗಳನ್ನು ಸರಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮೀಷನರ್ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಡಾ. ಬೋರಲಿಂಗಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.