ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ : ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ
- 15 Jan 2024 , 3:44 AM
- Delhi
- 99
ನವದೆಹಲಿ : ಜಗತ್ತಿನಾದ್ಯಂತ ಹರಡಿರುವ ಮಹಾಮಾರಿ ಕರೊನಾ ವೈರಸ್ ನಡುವೆಯೂ ನಮ್ಮ ರಾಷ್ಟ್ರವು ಇಂದು 74 ನೇ ಸ್ವಾತಂತ್ರ್ಯೋತ್ಸವಕ್ಕೆ ಸಕಲ ರೀತಿಯಲ್ಲಿ ಸಿದ್ಧವಾಗಿದೆ. ಪ್ರತಿವರ್ಷ ಸಂಭ್ರಮದಿಂದ ಆಚರಿಸುವ ಸ್ವಾತಂತ್ರ್ಯ ದಿನವನ್ನು ಈ ವರ್ಷ ಕೊರೋನಾ ಮಹಾಮಾರಿ ಆಕ್ರಮಿಸಿರುವ ಹಿನ್ನೆಲೆ ಸರಳವಾಗಿ ಆಚರಿಸಲಾಗುತ್ತಿದೆ.ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ನಮ್ಮ ದೇಶ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಕರೊನಾ ಭೀತಿಯಿಂದಾಗಿ ಸಾಮಾಜಿಕ ಅಂತರವನ್ನು ಪಾಲಿಸಿ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದೆ.


ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಯ ಕೋರಿ, ರಾಜಘಾಟ್ ಕ್ಕೆ ತೆರಳಿ ಮಹಾತ್ಮ ಗಾಂಧೀಜಿಯ ಸ್ಮಾರಕಕ್ಕೆ ನಮನವನ್ನು ಸಲ್ಲಿಸಿ ನಂತರ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಹಾಗೂ ಭವ್ಯ ಭಾರತವನ್ನು ಕುರಿತು ಭಾಷಣವನ್ನು ಆರಂಭಿಸಿದ್ದಾರೆ. ಸತತ 7 ನೆ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ದ್ವಜಾರೋಹಣ ಮಾಡಿದ್ದಾರೆ.


ಕರೋನಾ ಭೀತಿಯಿಂದಾಗಿ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ನೀಡಿಲ್ಲ.ಈ ವರ್ಷ ಆಚರಣೆ ಸರಳವಾದರೂ ನಾವೆಲ್ಲರೂ ದೇಶಕ್ಕಾಗಿ ಮಡಿದ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು ಸ್ಮರಿಸುತ್ತಾ ಹೆಮ್ಮೆ, ಗೌರವದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸೋಣ.










