ಕುಂದಾನಗರಿಯಲ್ಲಿ ಮಳೆ ಹನಿಯ ನಡುವೆ ಸಂಭ್ರಮದ ಸ್ವಾತಂತ್ರೋತ್ಸವ
- 18 Dec 2023 , 12:24 AM
- Belagavi
- 101
ಬೆಳಗಾವಿ : ತುಂತುರು ಮಳೆ ಹನಿಯ ನಡುವೆ ಬೆಳಗಾವಿಯಲ್ಲಿ ಸಂಭ್ರಮದ 74 ನೇ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಲ ಸಂಪನ್ಮೂಲ ಸಚಿವರಾದ ರಮೇಶ ಜಾರಕಿಹೊಳಿ ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.


ಕೊರೊನಾ ಮಹಾಮಾರಿಯ ಕಾರಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲಿಲ್ಲ. ಪೊಲೀಸರು, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ತುಕಡಿಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಥಸಂಚಲನದಲ್ಲಿ ಭಾಗಿಯಾಗಿದರು.


ಈ ಸಂದರ್ಭದಲ್ಲಿ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೊಲೀಸ್ ಆಯುಕ್ತರಾದ ಡಾ.ಕೆ.ತ್ಯಾಗರಾಜನ್, ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ. ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರು ಉಪಸ್ಥಿತರಿದ್ದರು.










