ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಸನ್ಮಾನ

  • 15 Jan 2024 , 4:53 AM
  • Haveri
  • 166

ಹಾವೇರಿ: ನಗರದ ಟ್ಯಾಗೋರ್ ಶಿಕ್ಷಣ ಸಂಸ್ಥೆಯ, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಕಾಲೇಜಿನ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರೊ.ಡಾ.ಲಕ್ಷ್ಮಣ ಎಸ್ ಚಳಗೇರಿ ದ್ವಜಾರೋಣ ಮಾಡುವದರ ಮೂಲಕ ಸರಳವಾಗಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಮ್ಮ ಪ್ರೌಢಶಾಲೆಯ 2019-2020 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಸನ್ಮಾನಿಸಲಾಯಿತು. ನಮ್ಮ ಶಾಲೆಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವು ಶೇಕಡಾ 81.95ರಷ್ಟು ಬಂದಿರುತ್ತದೆ. ಪರೀಕ್ಷೆಗೆ ಕುಳಿತ 133 ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 73 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕುಮಾರ.ಶ್ರೀವಿಜಯ ಪಿ ಪಾಟೀಲ. 605 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾನೆ. ಕುಮಾರಿ. ಖುಷಿ ಪಿ ವಾಲಿ 597 ಅಂಕಗಳನ್ನು ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಕುಮಾರಿ.ಅನುಶಾ ಜಿ ಇನಾಮದಾರ 588 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾಳೆ. ಈ ವಿದ್ಯಾರ್ಥಿಗಳ ಸಾಧನೆಯನ್ನು ನಮ್ಮ ಶಾಲೆಯ ಅಧ್ಯಕ್ಷರಾದ ರೋ.ವಿ.ಸಿ.ಪಾಟೀಲ, ಕಾರ್ಯದರ್ಶಿಗಳಾದ ರೋ.ಡಾ.ಬಸವರಾಜ ಎಸ್ ಕೇಲಗಾರ, ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ರೋ.ಜಗದೀಶ ಕಲ್ಯಾಣಿ ಮತ್ತು ಟ್ಯಾಗೋರ್ ಶಿಕ್ಷಣ ಸಂಸ್ಥೆಯ ಎಲ್ಲಾ ನಿರ್ದೇಶಕರು ಹಾಗೂ ರೋಟರಿ ಕ್ಲಬ್ಬಿನ ಸದಸ್ಯರು, ಪ್ರಾಚಾರ್ಯರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ .

promotions

promotions

Read More Articles