ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಳಗಾವಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತರುತ್ತಿರುವ ಭೂ ಸುಧಾರಣಾ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಇಂದು ಅಥಣಿ ಕಾಂಗ್ರೆಸ್ ಘಟಕದ ವತಿಯಿಂದ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಕಾಯ್ದೆಗಳಿಂದ ರಾಜ್ಯದ ಬಡ ಜನರಿಗೆ ಹಾಗೂ ರೈತರಿಗೆ, ಕಾರ್ಮಿಕರಿಗೆ ಅನ್ಯಾಯ ವಾಗುತ್ತಿದೆ ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿದೆ ಆಡಳಿತ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಪ್ರತಿಭಟನೆ ಮಾಡಿದರು . ಇದೇ ಸಮಯದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಮಾಡುವಲ್ಲಿ ವಿಫಲವಾಗಿ ಇಗ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದೆ ಇದನ್ನು ತಡೆಯಲು ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹಾಗೂ ರಾಜ್ಯದಲ್ಲಿ ಮತ್ತೆ ಪ್ರವಾಹ ಬಂದರು ಸಹ ನಿರಾಶ್ರಿತರ ಕೂಗು ಬಿಜೆಪಿ ನಾಯಕರಿಗೆ ಕೇಳಿಸಿಲ್ಲ ಹಾಗೂ ಆಡಳಿತ ಪಕ್ಷದ ಭ್ರಷ್ಟಾಚಾರ ಮಾಡಿಲ್ಲ ಎಂದರೆ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು ಎಂಬುದು ಆಗ್ರಹಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

promotions

promotions

Read More Articles