ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಭಕ್ತರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಜೂನ್ 15 ರವರೆಗೆ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶವಿಲ್ಲ. ಯಲ್ಲಮ್ಮದೇವಿ ದೇವಸ್ಥಾನಕ್ಕೆ ಎಲ್ಲ ರಾಜ್ಯಗಳಿಂದ ಭಕ್ತರು ಆಗಮಿಸುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯಕ್ಕೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ದೇವಸ್ಥಾನದಲ್ಲಿ ಎಂದಿನಂತೆ ಧಾರ್ಮಿಕ ವಿಧಿವಿಧಾನಗಳು ಮತ್ತು ಸರ್ಕಾರದ ಮಾರ್ಗಸೂಚಿ ಪ್ರಕಾರ ಪೂಜೆ ನಡೆಸಲಾಗುತ್ತಿದೆ ಎಂದು ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ತಿಳಿಸಿದ್ದಾರೆ.