ಕನಕಪುರದ ಬಂಡೆಗೂ ಕೊರೋನಾ ಸೋಂಕು
- 15 Jan 2024 , 3:38 AM
- Bengaluru
- 113
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು. ಇದು ರಾಜಕಾರಣಿಗಳನ್ನೂ ಬಿಟ್ಟಿಲ್ಲ . ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ , ವಿಪಕ್ಷ ನಾಯಕ ಸಿದ್ದರಾಮಯ್ಯ , ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ಗುರಿಯಾಗಿದ್ದರು.

ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. ಡಿಕೆಶಿ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದ ಹಿಂದೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು . ಇಂದು ವರದಿ ಬಂದಿದ್ದು , ವರದಿಯಲ್ಲಿ ಡಿಕೆಶಿಗೆ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಡಿ.ಕೆ.ಶಿವಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ.











