ಡಿಕೆ ಶಿವಕುಮಾರ್ ಗುಣಮುಖರಾಗಿ ಹೊರಬರಲಿ ಎಂದು ಲಕ್ಷ್ಮೀ ಹೆಬ್ಬಾಳಕರ್ ಟ್ವೀಟ್
- 9 Jan 2024 , 1:33 AM
- Belagavi
- 105
ಬೆಳಗಾವಿ: ಡಿ.ಕೆ ಶಿವಕುಮಾರ್ ಕೊರೊನಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಅಂತಾ ಪ್ರಾರ್ಥಿಸುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾರೈಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಲಕ್ಷ್ಮೀ ಹೆಬ್ಬಾಳಕರ್ ಕೆಪಿಸಿಸಿ ಅಧ್ಯಕ್ಷರು ಹಾಗೂ ನಮ್ಮ ನಿಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಡಿ.ಕೆ ಶಿವಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆದಷ್ಟು ಬೇಗ ಗುಣಮುಖರಾಗಿ ಎಂದಿನಂತೆ ತಮ್ಮ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಲಕ್ಷಾಂತರ ಅಭಿಮಾನಿಗಳ ಹಾಗೂ ಕಾರ್ಯಕರ್ತರ ಪರವಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.












