ಮಧ್ಯರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಅಭಿಮಾನಿಗಳು
- 14 Jan 2024 , 10:44 PM
- Belagavi
- 222
ಬೆಳಗಾವಿ.: ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಅಭಿಮಾನಿಗಳು ಇಂದು ಮದ್ಯರಾತ್ರಿ ತಾವು ಗುರುತಿಸಿದ ಜಾಗದಲ್ಲಿಯೇ ಕ್ರಾಂತಿವೀರ ರಾಯಣ್ಣನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಮೂಲಕ ಕ್ರಾಂತಿಯ ಕಹಳೆ ಊದಿದ್ದಾರೆ.

ಕೆಲ ವರ್ಷಗಳಿಂದ ಪೀರನವಾಡಿ ಗ್ರಾಮದ ಮುಖ್ಯ ಸರ್ಕಲನಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಹೋರಾಟ ಮಾಡುತ್ತ ಬಂದಿದ್ದ ರಾಯಣ್ಣನ ಪರಮ ಭಕ್ತರು ಇಂದು ಮೂರ್ತಿ ಪ್ರತಿಷ್ಠಾಪನೆ ಮಾಡಿ ಹೂಮಾಲೆ ಹಾಕಿ ರಾಯಣ್ಣನ ಪರ ಘೋಷಣೆಗಳನ್ನು ಕೂಗುವ ಮೂಲಕ ರಾತ್ರಿ ವಿಜಯೋತ್ಸವ ಆಚರಿಸಿದ್ದಾರೆ. ನಿನ್ನೆಯಷ್ಟೇ ಗುರುವಾರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಆಗ್ರಹಿಸಿ ದೊಡ್ಡ ಹೋರಾಟವೇ ನಡೆದಿತ್ತು.

ರಾಜ್ಯದ ವಿವಿಧ ಕಡೆಗಳಿಂದ ಅಭಿಮಾನಿಗಳು, ಮುಖಂಡರು ಆಗಮಿಸಿದ್ದರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು 29 ರಂದು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಘೋಷಣೆ ಮಾಡಿದ್ದರು ಆದರೆ ಇಂದು ಮಧ್ಯರಾತ್ರಿ ಕ್ರಾಂತಿವೀರ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿವಾದಕ್ಕೆ ಅಂತ್ಯ ಹಾಡಿದ್ದಾರೆ. ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ವಿಷಯ ಪೋಲೀಸರಿಗೆ ಗೊತ್ತಾಗುತ್ತಿದ್ದಂತೆಯೇ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ, ಸದ್ಯ ಸ್ಥಳದಲ್ಲಿ ವಾತಾವರಣ ತಿಳಿಯಾಗಿದೆ.










