ಸಂಗೊಳ್ಳಿ ರಾಯಣ್ಣ ಮೂರ್ತಿ ವಿವಾದ, ಸಂಧಾನ ಸಭೆ ಸಕ್ಸಸ್

ಬೆಳಗಾವಿ: ಕಳೆದ ಒಂದು ವಾರದಿಂದ ಇದ್ದ ಮೂರ್ತಿ ವಿಚಾರ ಇಂದು ಸುಖಾಂತ್ಯ ಕಂಡಿದೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರುಸ್ಥಾಪನೆ ವಿಚಾರ ವಿವಾದ ಅಂತೂ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ಎಡಿಜಿಪಿ ಅಮರಕುಮಾರ್ ಪಾಂಡೆ ನೇತೃತ್ವದಲ್ಲಿ ನಡೆದ ಸುದೀರ್ಘ ಸಂಧಾನ ಸಭೆ ಸಕ್ಸಸ್ ಆಗಿದೆ.

promotions

ರಾಯಣ್ಣನ ಅಭಿಮಾನಿಗಳು ಹಾಗೂ ಕನ್ನಡ ಸಂಘಟನೆ ಮುಖಂಡರು ಗುರುತಿಸಿದ್ದ ಜಾಗದಲ್ಲೇ ರಾಯಣ್ಣ ಮೂರ್ತಿ ಪ್ರತಿಷ್ಠಾಪಿಸಲು ಸಭೆಯಲ್ಲಿ ಒಮ್ಮತದ ನಿರ್ದಾರವನ್ನು ಕೈಗೊಳ್ಳಲಾಗಿದೆ. ಆದರೆ ಈ ಪೀರನವಾಡಿ ವೃತ್ತಕ್ಕೆ ಶಿವಾಜಿ ಸರ್ಕಲ್ ಎಂದು ಹೆಸರಿಸಲು ತೀರ್ಮಾನಿಸಿದ್ದು ಇದಕ್ಕೆ ಎರಡು ಬಣದ ನಾಯಕರು ಸಮ್ಮತಿ ಸೂಚಿಸಿದ್ದಾರೆ. ನಂತರ ಎಡಿಜಿಪಿ ಅಮರಕುಮಾರ ಪಾಂಡೆ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಹಾಗೂ ಶಿವಾಜಿ ಮಹಾರಾಜರ ಪುತ್ಥಳಿಗೆ ಭೇಟಿ ನೀಡಿ ಮಾಲಾರ್ಪಣೆ ಮಾಡುವ ಮೂಲಕ ಸಮಸ್ಯೆಗೆ ತಿಲಾಂಜಲಿ ಇಟ್ಟಿದ್ದಾರೆ

promotions

Read More Articles