ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬೇಗನೆ ಗುಣಮುಖರಾಗಲೆಂದು ಪ್ರಾರ್ಥನೆ

  • 15 Jan 2024 , 2:15 AM
  • Haveri
  • 217
<p>
ಬ್ಯಾಡಗಿ: ತಾಲೂಕಿನ ಕದರಮಂಡಲಗಿ ಗ್ರಾಮದ ಆಂಜನೇಯ ಸ್ವಾಮಿ ದೇವರಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಬೇಗನೆ ಗುಣಮುಖರಾಗಲೆಂದು ಬಿಜೆಪಿ ಕಾರ್ಯಕರ್ತರು ಶನಿವಾರ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಯುವಮುಖಂಡ ಸಂಜೀವ ಮಡಿವಾಳರ ಸ್ಥಳೀಯ ಶಾಸಕರು ಸೇರಿದಂತೆ ವೈದ್ಯಾಧಿಕಾರಿಗಳು, ಪೋಲಿಸ ಇಲಾಖೆ, ಸ್ಥಳೀಯ ಆಡಳಿತ ಸಂಸ್ಥೆಗಳು ಕರೋನ ನಿಯಂತ್ರಿಸಲು ಸಾಕಷ್ಟು ಕೆಲಸ ಮಾಡಿದ್ದಾರೆ. ಮುಂಜಾಗೃತ ಕ್ರಮವಾಗಿ ಈ ವೇಳೆ ಮಾಸ್ಕ, ಸ್ಯಾನಿಟೈಜರ್ ವಿತರಣೆ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಸ್ಥಳೀಯ ಶಾಸಕರು ಪ್ರಾಮಾಣಿಕವಾಗಿ ಮಾಡಿದ್ದಾರೆ. ಕಳೆದ ಐದಾರು ದಿನಗಳಿಂದ ಅವರಿಗೂ ಕರೋನ ಪಾಜಿಟಿವ್ ದೃಡಪಟ್ಟಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ದೇವರು ಅವರನ್ನು ಗುಣಮುಖರನ್ನಾಗಿಸಿ ಸಾರ್ವಜನಿಕ ಸೇವೆಯಲ್ಲಿ ಬೇಗನೆ ಪಾಲ್ಗೊಳ್ಳಲು ಆಶೀರ್ವದಿಸುವಂತೆ ಮತಕ್ಷೇತ್ರದ ಜನತೆ ಹಾಗೂ ಬಿಜೆಪಿ ಘಟಕದ ವತಿಯಿಂದ ದೇವರಿಗೆ ಮೊರೆ ಹೋಗಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಶಿವಕುಮಾರ ಮೋಟೆಬೆನ್ನೂರು, ಚಂದ್ರು ಗೂರಣ್ಣನವರ, ಅರುಣಕುಮಾರ ಹಲಗೇರಿ, ಕಿರಣ ಕಟ್ಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.
</p>

promotions

Read More Articles