ಕೊರೊನಾ ವಾರಿಯರ್ಸ್‍ಗಳ ಬೆನ್ನಿಗೆ ನಿಂತ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಬೆಂಗಳೂರು: ಕಿಲ್ಲರ್ ಕೊರೊನಾ ವಿರುದ್ಧ ಹಗಲಿರುಳು ತಮ್ಮ ಜೀವಗಳನ್ನು ಲೆಕ್ಕಿಸದೇ ಹೋರಾಡುತ್ತಿರುವ ಎಲ್ಲ ಕೊರೊನಾ ವಾರಿಯರ್ಸ್‍ಗಳಿಗೆ ಜೀವ ವಿಮೆಯನ್ನು ವಿಸ್ತರಿಸಬೇಕು ಹಾಗೂ ಜನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ.
ಕೊರೋನಾ ಸಂಕಷ್ಟದಲ್ಲಿರುವ ಕೆಲವು ವರ್ಗಗಳು ಸರಕಾರದ ಸೌಲಭ್ಯದಿಂದ ವಂಚಿತರಾಗಿದ್ದು ಅಂತವರಿಗೂ ಪರಿಹಾರ ನೀಡುವಂತೆ ಬೆಳಗಾವಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದ್ದು ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಮಹಿಳಾ ಉದ್ಯೋಗಿಗಳು, ಸ್ವಯಂ ಉದ್ಯೋಗಿಗಳು, ಕರಕುಶಲ ಕಾರ್ಮಿಕರಿಗೆ ಸಹಾಯ ಧನ ನೀಡಬೇಕು. ಅದೇ ರೀತಿ ಸಾಂಕ್ರಾಮಿಕ ರೋಗವನ್ನು ತಡೆಗಟ್ಟವ ಸಲುವಾಗಿ ನಿರಂತರವಾಗಿ ಶ್ರಮಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ವೈದ್ಯಕೀಯ ವಿಮೆ ಯೋಜನೆಯನ್ನು ವಿಸ್ತರಿಸಬೇಕು ಎಂಬ ಮನವಿ ಪತ್ರವನ್ನು ಸಿಎಂ ಯಡಿಯೂರಪ್ಪ ಅವರಿಗೆ ಲಕ್ಷ್ಮೀ ಹೆಬ್ಬಾಳಕರ ಸಲ್ಲಿಸಿದ್ದಾರೆ.

promotions

Read More Articles