5 ತಿದ್ದುಪಡಿ ವಿಧೇಯಕಗಳ ಮಂಡನೆ

 ಬೆಳಗಾವಿ : ಸೋಮವಾರದ ವಿಧಾನ ಸಭಾ ಕಲಾಪದಲ್ಲಿ 5 ವಿಧೇಯಕಗಳನ್ನು ಮಂಡಿಸಲಾಗಿದೆ.

promotions

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 2023ರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಕೆಲವು ಇತರೆ ಕಾನೂನು ತಿದ್ದುಪಡಿ ವಿಧೇಯಕ, ಕಾನೂನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ 2023ರ ನ್ಯಾಯವಾದಿಗಳ ವಿರುದ್ಧ ಹಿಂಸಾಚರ ವಿರೋಧಿ ತಿದ್ದುಪಡಿ ವಿಧೇಯಕ, 2023ರ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪಹಂಚಿಕೆ ತಿದ್ದುಪಡಿ ವಿಧೇಯಕ, ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವಿಧೇಯಕ, ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಸುರೇಶ್ ಬಿ.ಎಸ್. 2023ರ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ ತಿದ್ದುಪಡಿ ವಿಧೇಯಕವನ್ನು ಸದನದಲ್ಲಿ ಮಂಡಿಸಿದರು. ಈ ವಿಧೇಯಕಗಳು ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ.  

promotions

ಇದೇ ವೇಳೆ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದ ಸಿದ್ಧರಾಮಯ್ಯನವರು 2023-24ನೇ ಸಾಲಿನ ಪೂರಕ ಅಂದಾಜುಗಳು-ಮೊದಲನೇ ಕಂತಿನ ಬೇಡಿಕೆಗಳ ಪ್ರಸ್ತಾವನೆಗಳನ್ನು ಸದನದಲ್ಲಿ ಮಂಡಿಸಿದರು. 

Read More Articles