ನಟಿ ರಾಗಿಣಿಯನ್ನು ಬಂಧಿಸಿರುವ ಸಿಸಿಬಿ
- 14 Jan 2024 , 10:42 PM
- Bengaluru
- 153
ಬೆಂಗಳೂರು : ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ಪೊಲೀಸ್ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಅಧಿಕಾರಿಗಳು ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ ಹೀಗಾಗಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿ ರಾಗಿಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.












