ಗಾಂಜಾ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ರಮೇಶ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲರೂ ಸಮರ್ಥರಾಗಿದ್ದೇವೆ. ಪೀರನವಾಡಿ ವೃತ್ತಕ್ಕೆ ಶಿವಾಜಿ ಎಂಬ ನಾಮಕರಣ ಮಾಡಿರುವುದು ಅದು ಪಾಲಿಕೆಯಲ್ಲಿ ಠರಾವು ಪಾಸ್ ಮಾಡದೆ ಅಳವಡಿಸಿರುವುದು ಜಿಲ್ಲಾಡಳಿತ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಬೇರೆ ಜಿಲ್ಲೆಯವರು ಇಲ್ಲಿ ಬಂದು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ನಾವು ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಕಳೆದ ಮೂರ್ನಾಲ್ಕು ತಿಂಗಳಿಗೆ ಹೊಲಿಸಿದರೆ ಕರೋನಾ ಹತೋಟಿಗೆ ಬಂದಿದೆ. ಆದರೆ ಅಧಿಕಾರಿಗಳು ಮೈ ಮರೆಯದಂತೆ ಸೂಚನೆ ನೀಡಿದ್ದೇನೆ. ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಕೋವಿಡ್ ವಿಚಾರದಲ್ಲಿ ಸೂಕ್ತವಾಗಿ ನಡೆದುಕೊಂಡಿದೆ. ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಕಡಿಮೆಯಾಗಿದೆ ಜನರು ಸಹ ಜಾಗೃತವಾಗಬೇಕು. ಸೋಂಕಿತರಿಗಿಂತ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಬೆಳಗಾವಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ವಿಚಾರ ಕೊವೀಡ್ ಕಾರಣದಿಂದ ಕಾಮಗಾರಿ ವಿಳಂಬವಾಗಿದೆ. ಆದರೆ ಸದ್ಯ‌ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಕೇಂದ್ರ ಬಸ್ ನಿಲ್ದಾಣ ಕಾಮಗಾರಿಗೆ ವೇಗ ಪಡೆಯಲು ದಂಡು ಮಂಡಳಿಯ ಸಿಇಒ ಹಾಗೂ ಜಿಲ್ಲಾಧಿಕಾರಿ ಜೊತೆ ಈಗಾಗಲೇ ಸಭೆ ನಡೆಸಲಾಗಿದೆ ಎಂದು ಹೇಳಿ ಡ್ರಗ್ಸ್ ಮತ್ತು ಗಾಂಜಾ ಪ್ರಕರಣ ಬೆಳಗಾವಿ ನಗರದಲ್ಲಿ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರಿಕೆಯಿಂದ ವಹಿಸಬೇಕಿದೆ. ಗಾಂಜಾ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ‌ನೀಡಿದ್ದೇನೆ ಎಂದು ಹೇಳಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ ನಿಂಬರಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

promotions

promotions

Read More Articles