ಡ್ರಗ್ಸ್ ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಘಟಕ ವತಿಯಿಂದ ಮನವಿ

ಚಿಕ್ಕೋಡಿ: ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವವರನ್ನು ತಕ್ಷಣವೇ ಬಂಧಿಸಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಇಂದು ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಚಿಕ್ಕೋಡಿ ಜಿಲ್ಲೆಯ ವತಿಯಿಂದ ಮನವಿ ಸಲ್ಲಿಸಲಾಯಿತು ರಾಜ್ಯದಲ್ಲಿ ಡ್ರಗ್ ಮಾಫಿಯಾ ಅವ್ಯಾಹತವಾಗಿ ಬೆಳೆದಿದೆ ಇದು ಅಕ್ಷಮ್ಯ ಅಪರಾಧ ಡ್ರಗ್ಸ್ ಮಾಫಿಯಾದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಾನ್ಯ ಚಿಕ್ಕೋಡಿ ವಿಭಾಗಾಧಿಕಾರಿ ಅವರಿಗೆ ಮನವಿಯನ್ನು ಕೊಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ರಾಜೇಶ್ ನೇರ್ಲಿ, ವಿಭಾಗ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರವಿ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಅಪ್ಪಾಜಿಗೋಳ,ರಮೇಶ್ ಖೇತಗೌಡ್ರ ಮತ್ತು ಜಿಲ್ಲಾ ಯುವಾ ಮೋರ್ಜಾ ಅಧ್ಯಕ್ಷರಾದ ದೀಪಕ್ ಪಾಟೀಲ,ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜನ್ ಶಶಿಕಾಂತ ಮಠಪತಿ,ರಮೇಶ್ ಕಾಳನ್ನವರ ಮತ್ತು ಜಿಲ್ಲೆಯ ಎಲ್ಲ ಮಂಡಲಗಳ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು

promotions

promotions

Read More Articles