ತಾಪಂ ಕಾರ್ಯನಿರ್ವಾಹಕ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಜಿಪಂ ಅಧ್ಯಕ್ಷೆ ಆಶಾ ಐಹೊಳೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಾ ಪಂಚಾಯತ ಸಭಾಭವನದಲ್ಲಿ ತಾಲ್ಲೂಕಾಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷ ಆಶಾ ಐಹೊಳೆ ಕಾಗಾವಡ ತಾಲ್ಲೂಕಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣಗೌಡ ಏಗಣಗೌಡರ ಅವರನ್ನ ಅಧಿಕಾರಿಗಳ ಸಮ್ಮುಖದಲ್ಲಿ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಜಿಲ್ಲಾ ಪಂಚಾಯತ ಅಧ್ಯಕ್ಷ ಸ್ಥಾನವು ಕ್ಯಾಬಿನೆಟ್ ದರ್ಜೆಯ ಸಚಿವರ ಸ್ಥಾನವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡರೂ ಸರ್ಕಾರದ ನಿಯಮಾವಳಿ ಪ್ರಕಾರ ಪ್ರತಿ ಕಾರ್ಯಕ್ರಮಕ್ಕೆ ಜಿಪಂ ಅಧ್ಯಕ್ಷರನ್ನು ಆಹ್ವಾನಿಸುವದು ಸರ್ಕಾರದ ಆದೇಶದಲ್ಲಿದೆ ಆದರೆ ನಾನು ಮಹಿಳೆಯಾಗಿದ್ದರಿಂದ ನನ್ನನ್ನು ನಿರ್ಲಕ್ಷಿಸುಲಾಗುತ್ತಿದೆ ಎಂದು ಪ್ರಶ್ನಿಸಿದರು. ನನ್ನ ಸ್ವಕ್ಷೇತ್ರ ಉಗಾರ ಜಿಲ್ಲಾ ಪಂಚಾಯತ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳ ಬಗ್ಗೆ ನನ್ನ ಗಮನಕ್ಕೆ ತರದೇ ತಾವೇ ಖುದ್ದಾಗಿ ಚುನಾಯಿತ ಪ್ರತಿನಿಧಿಗಳನ್ನು ನಿರ್ಲಕ್ಷಿಸಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಈ ಬಗ್ಗೆ ನನಗೆ ಸ್ಪಷ್ಡೀಕರಣ ನೀಡಬೇಕೆಂದು ಒತ್ತಾಯಿಸಿದರು.

promotions

ಈ ಸಂದರ್ಭದಲ್ಲಿ ಮಾತನಾಡಿದ ಕಾಗವಾಡ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣಗೌಡ ಏಗಣಗೌಡರ ಈ ಕಾರ್ಯಕ್ರಮಗಳ ಬಗ್ಗೆ ಪಂಚಾಯತ ಅಭಿವೃದ್ಧಿ ಅಧಿಕಾರಿ ನನ್ನ ಗಮನಕ್ಕೆ ತಂದಿಲ್ಲ ಸರ್ಕಾರದ ನಿಯಮಾವಳಿ ಪ್ರಕಾರ ತಮ್ಮನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವದು ನಮ್ಮ ಕರ್ತವ್ಯ. ಇನ್ನು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಮಜಾಯಿಸುವ ಪ್ರಯತ್ನ ಮಾಡಿದರು. ಇದಕ್ಕೂ ಒಪ್ಪದ ಜಿಲ್ಲಾ ಪಂಚಾಯತ ಅಧ್ಯಕ್ಷರು ಪಂಚಾಯತ ಅಭಿವೃದ್ಧಿ ಅಧಿಕಾರಿ ಮೇಲೆ ಸೂಕ್ತ ಕ್ರಮಕ್ಕೆ ಬಿಗಿಪಟ್ಟು ಹಿಡಿದರು. ಮಧ್ಯ ಪ್ರವೇಶಿಸಿದ ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ದರ್ಶನ ಎ.ವಿ. ಇನ್ನು ಮುಂದೆ ಬೆಳಗಾವಿ ಜಿಲ್ಲೆಯಾದ್ಯಂತ ನಮ್ಮ ಇಲಾಖಾ ವ್ಯಾಪ್ತಿಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ತಮಗೆ ಕಡ್ಡಾಯವಾಗಿ ಆಹ್ವಾನಿಸಲು ಎಲ್ಲ ತಾಪಂ ಹಾಗೂ ಗ್ರಾಮ ಪಂಚಾಯತಿಗಳಿಗೆ ಪತ್ರ ಮುಖೇನ ತಿಳಿಸಲಾಗುವದು ಎಂದು ಹೇಳಿ ವಾಗ್ವಾದಕ್ಕೆ ತೆರೆ ಎಳೆದರು.

promotions

Read More Articles