ಸೇವಾ ಸಪ್ತಾಹದ ಮೂಲಕ ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಆಚರಣೆ !
- 14 Jan 2024 , 11:46 PM
- Belagavi
- 129
ಬೆಳಗಾವಿ : ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರವರೆಗೆ ಸೇವಾಸಪ್ತಾಹ ಪಂಡಿತ ದೀನ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿಯವರ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮ ಕರ್ನಾಟಕದಲ್ಲಿ ಆಯೋಜಿಸುವ ಕುರಿತು ಬೆಳಗಾವಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಶಾಸಕರು ಮತ್ತು ಬೆಳಗಾವಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದ ಸಂಜಯ ಪಾಟೀಲ್ ಅವರ ನೇತೃತ್ವದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷ ಸೆಪ್ಟೆಂಬರ್ 17 ನರೇಂದ್ರ ಮೋದಿ ಅವರು 70ರ ವಸಂತಕ್ಕೆ ಕಾಲಿಡುತ್ತಿರುವುದು ಸಂತಸದ ವಿಷಯವಾಗಿದೆ.

ಸೆಪ್ಟೆಂಬರ್ 17 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನವನ್ನು ಆಚರಿಸಿ ಅವರ ಆರೋಗ್ಯಕರ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆಯನ್ನು ಮಾಡುತ್ತಾ ಬಂದಿದ್ದೇವೆ. ಸೇವಾ ಹಿ ಸಂಘಟನೆ ಎಂಬ ಪರಿಕಲ್ಪನೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾರವರ ಕರೆಯ ಮೇರೆಗೆ ಇದೆ ಸಪ್ಟೆಂಬರ್ 14 ರಿಂದ ಅಕೊಬರ್ 02 ರವರಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಕರ್ನಾಟಕದಲ್ಲಿ ಆಯೋಜಿಸಲಾಗಿದೆ ಎಂದರು.

- ಪ್ರತೀ ಮಂಡಲಗಳಲ್ಲಿ 70 ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು.
- 70 ಬಡ ಮರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳನ್ನು ನೀಡುವುದು .
- ಕೋವಿಡ್ 19 ರ ನಿಯಮಗಳನ್ನು ಪಾಲಿಸಿ ಪ್ರತೀ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲಗಳನ್ನು ವಿತರಿಸುವುದು .
- ಸ್ಥಳೀಯ ಅವಶ್ಯಕತೆಗನುಗುಣವಾಗಿ ಆಸ್ಪತ್ರೆಯ ಮೂಲಕ ಕೋವಿಡ್ -19 ರಿಂದ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವುದು.
- ಯುವಮೋರ್ಚಾದ ವತಿಯಿಂದ ರಾಜ್ಯದಲ್ಲಿ 10 ರಕ್ತದಾನ ಶಿಬಿರಗಳನ್ನು ಮಾಡುವುದು. ಪ್ರತಿ ಜಿಲ್ಲೆಗಳಲ್ಲಿ ಕನಿಷ್ಟ 1ರಕ್ತದಾನ ಶಿಬಿರ ಆಯೋಜಿಸುವುದು.
- ಪ್ರತೀ ಬೂತ್‌ನಲ್ಲಿ 70 ವೃಕ್ಷಾರೋಪಣಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆಯ ಸಂಕಲ್ಪಕಾರ್ಯಕ್ರಮ. * ಪ್ರತೀ ಜಿಲ್ಲೆಗಳ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವುದು, ಒಂದು ಬಾರಿ ಉಪಯೋಗಿಸುವ ಪ್ಲಾಸ್ಟಿಕ್ ( Single Use Plastic ) ನ್ನು ನಿಷೇಧಿಸುವ ಸಂಕಲ್ಪವನ್ನು ಮಾಡುವುದು ಮತ್ತು ಜನರನ್ನು ಪ್ರಧಾನಮಂತ್ರಿಗಳ ಸಿಂಹವಾಣಿಯ ಈ ಕರೆಗೆ ಜೋಡಿಸುವುದು.
- ಪ್ರತೀ ಜಿಲ್ಲಾ ಕೇಂದ್ರದಲ್ಲಿ 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವುದು.
- ಪ್ರಧಾನಮಂತ್ರಿಗಳ ದೂರಗಾಮಿ ಯೋಜನೆ , ಅದ್ವಿತೀಯ ಕಾರ್ಯ ಮತ್ತು ಕಠಿಣ ಪರಿಶ್ರಮದಿಂದ ನಾವು ಪ್ರೇರೇಪಿತರಾಗಿದ್ದೇವೆ . ಈ ಸಂದರ್ಭದಲ್ಲಿ ಅವರ ವ್ಯಕ್ತಿತ್ವ ಮತ್ತು ದೃಷ್ಟಿಕೋನ ಕುರಿತಂತೆ 20 ದೊಡ್ಡ ವರ್ಚುವಲು ಸಮಾವೇಶವನ್ನು ನಡೆಸುವುದು.
ಈ ಸಮಾವೇಷದಲ್ಲಿ ಸಮಾಜದ ಪ್ರಮುಖರು ಪ್ರಮುಖ ನಾಯಕರಿಂದ ಉಪನ್ಯಾಸ ಏರ್ಪಡಿಸುವುದು. ಇನ್ನು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ನರೇಂದ್ರ ಮೋದಿ ಅವರ ಹುಟ್ಟು ಹಬ್ಬವನ್ನೂ ಆಚರಿಸಲಾಗುದು ಮತ್ತು ಮಹಾತ್ಮ ಗಾಂಧೀಜಿ, ಪಂಡಿತ್ ದೀನದಯಾಳ್ ಜಯಂತಿ ಆಚರಣೆಯನ್ನು ಸಹ ಮಾಡಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.










