ವಿವಿಧ ಬೇಡಿಕೆಗಳ ಈಡೇರಿಕೆಗೆ ಗ್ರಾಮ ಪಂಚಾಯಿತಿ ನೌಕರರಿಂದ ಪ್ರತಿಭಟನೆ

ಬೆಳಗಾವಿ : ವೇತನ ಬಾಕಿ ಹಾಗೂ ಗ್ರೇಡ್ 2 ಬಡ್ತಿ ಪ್ರಮಾಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗ್ರಾಮ ಪಂಚಾಯಿತಿ ನೌಕರರು ಇಂದು ಪ್ರತಿಭಟನೆ ನಡೆಸಿದರು. ಜಿ.ಪಂ. ಸಿಇಒ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ನಂತರ ವೇತನ ಬಾಕಿ ಹಾಗೂ ಗ್ರೇಡ್ 2 ಬಡ್ತಿ ಪ್ರಮಾಣ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಕಚೇರಿಗಳ ಎದುರು ಅಂದಾಜು 65 ಸಾವಿರ ಗ್ರಾಮ ಪಂಚಾಯಿತಿ ನೌಕರರು ಇಂದು ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜನವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಗ್ರಾಮ ಪಂಚಾಯಿತಿ ನೌಕರರ ಸಂಘದ ಮುಖಂಡ ಮಾತನಾಡಿ, ಸರ್ಕಾರ ಗ್ರಾಮ ಪಂಚಾಯಿತಿ ನೌಕರರಿಗೆ 900 ಕೋಟಿ ರೂ. ವೇತನ ನೀಡಬೇಕಿತ್ತು.

promotions

ಆದರೆ 518 ಕೋಟಿ ರೂ. ವೇತನ ಬಿಡುಗಡೆ ಮಾಡಿದೆ. ಇನ್ನು 382 ಕೋಟಿ ವೇತನ ಬಾಕಿ ಉಳಿಸಿಕೊಂಡಿದೆ. ಎರಡು ವರ್ಷದಿಂದ ಈ ಕುರಿತು ಮನವಿ ಸಲ್ಲಿಸುತ್ತಿದ್ದರೂ ಸರ್ಕಾರ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡಲೇ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

promotions

Read More Articles