ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ ಅಂಗಡಿ ನಿಧನ

ಬೆಳಗಾವಿ : ಕೇಂದ್ರ ರಾಜ್ಯ ರೈಲ್ವೆ ಸಚಿವ ಹಾಗೂ ಬೆಳಗಾವಿಯ ಸಂಸದ ಸುರೇಶ ಅಂಗಡಿ (65) ನಿಧನ ಹೊಂದಿದ್ದಾರೆ. ಅವರಿಗೆ ಇತ್ತೀಚಿಗಷ್ಟೇ ಕೊರೋನಾ ಸೊಂಕು ತಗಲಿತ್ತು. ಕೊರೋನಾ ಸೊಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

promotions

promotions

Read More Articles