ದಿ. ಸುರೇಶ ಅಂಗಡಿ ನಿವಾಸಕ್ಕೆ ಸಚಿವ ಜಗದೀಶ್ ಶೆಟ್ಟರ್ ಸೇರಿದಂತೆ ಗಣ್ಯರ ಭೇಟಿ

ಬೆಳಗಾವಿ: ಕೇಂದ್ರ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆಯನ್ನು ನಿನ್ನೆ ದೆಹಲಿಯಲ್ಲಿರುವ ಲಿಂಗಾಯತ ರುದ್ರಭೂಮಿಯಲ್ಲಿ ನೆರವೇರಿಸಲಾಗಿತ್ತು. ಬಳಿಕ ಇಂದು ಶುಕ್ರವಾರ ಬೆಳಿಗ್ಗೆ ದೆಹಲಿಯಿಂದ ದಿ. ಸುರೇಶ ಅಂಗಡಿ ಕುಟುಂಬ ಬೆಳಗಾವಿಯ ವಿಶ್ವೇಶ್ವರಯ್ಯ ನಗರದಲ್ಲಿರುವ ನಿವಾಸದಲ್ಲಿ ಅವರ ಶಿವಗಣರಾಧನೆ ಆಗಮಿಸತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

promotions

ಪತ್ನಿ ಮಂಗಲ ಅಂಗಡಿ, ಪುತ್ರಿ ಹಾಗೂ ಅಳಿಯ ಮನೆಗೆ ಬರುತ್ತಿದ್ದಂತೆ ಕಾರ್ಯಕರ್ತರು, ಅಭಿಮಾನಿಗಳು ನಿವಾಸದತ್ತ ಬರುತ್ತಿದ್ದಾರೆ. ಜೊತೆಗೆ ಸಚಿವ ಜಗದೀಶ ಶೆಟ್ಟರ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪೊಲೀಸ್ ಆಯುಕ್ತ ತ್ಯಾಗರಾಜನ್ ಸೇರಿದಂತೆ ಗಣ್ಯಾತಿ ಗಣ್ಯರು ಸುರೇಶ ಅಂಗಡಿ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ

promotions

. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಮನೆಯ ಮುಂದೆ ವ್ಯವಸ್ಥೆ ಮಾಡಲಾಗಿದ್ದು. ದಿವಂಗತ ಸುರೇಶ ಅಂಗಡಿ ಅವರ ಭಾವ ಚಿತ್ರಕ್ಕೆ ಹೂ ಮಾಲೆ ಹಾಕಿ ನಮನ ಸಲ್ಲಿಸುತ್ತಿದ್ದಾರೆ.

Read More Articles