ಗ್ರಾಮಲೆಕ್ಕಾಧಿಕಾರಿ ನಾಗರಾಜ ಚಿಪ್ಪಲಕಟ್ಟೆ ನಿಧನ

ಬ್ಯಾಡಗಿ: ತಾಲ್ಲೂಕಿನ ತಹಸೀಲ್ದಾರ್ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮಲೆಕ್ಕಾಧಿಕಾರಿ ನಾಗರಾಜ ಚಿಪ್ಪಲಕಟ್ಟೆ (38) ಗುರುವಾರ ನಿಧನರಾಗಿದ್ದರೆ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಮಿಶ್ರಕೋಟಿ ಗ್ರಾಮದವರಾಗಿದ್ದ ಇವರು ಸರ್ಕಾರಿ ನೌಕರಿಗೆ ಸೇರಿ 18 ವರ್ಷವಾಗಿತ್ತು. ತಾಲೂಕಿನ ಹೆಡಿಗ್ಗೊಂಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಕೋವಿಡ್ ಸೊಂಕಿನಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು, ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

promotions

promotions

Read More Articles