ಕರ್ನಾಟಕ ಬಂದ್;ಜನ ಸಂಚಾರಕ್ಕೆ ತೊಂದರೆ, ಜನಜೀವನ ಅಸ್ತವ್ಯಸ್ತ
- 14 Jan 2024 , 10:26 PM
- Bengaluru
- 105
ಬೆಂಗಳೂರು: ಇಂದು ರಾಜ್ಯ ಸರ್ಕಾರದ ಕೃಷಿ ವಿರೋಧಿ ನೀತಿ ಖಂಡಿಸಿ ವಿವಿಧ ರೈತಪರ, ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿವೆ. ಈ ಬಂದಗೆ ಹಲವೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ. ಹಲವು ಕಡೆಗಳಲ್ಲಿ ಸಂಘಟನೆಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿವೆ, ಜನ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ, ಜನಜೀವನ ಅಸ್ತವ್ಯಸ್ತ ಆಗುತ್ತಿದ್ದು ರಾಜಧಾನಿ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡಿ ರಾಜದ್ಯಾಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.












