ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನೇಮಕ
- 15 Jan 2024 , 12:23 AM
- Mysuru
- 109
ಮೈಸೂರು: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರನ್ನು ನೇಮಕ ಮಾಡಲಾಗಿದೆ. ಬಿ. ಶರತ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮೈಸೂರಿನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದ್ದು, ವರ್ಗಾವಣೆ ಆಗಿರುವ ಬಿ. ಶರತ್ ಅವರಿಗೆ ಆದೇಶದಲ್ಲಿ ಯಾವುದೇ ಹುದ್ದೆ ತೋರಿಸಿಲ್ಲ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಶರತ್ ಅವರನ್ನು ಕಳೆದ ಆಗಸ್ಟ್ ತಿಂಗಳಿನಲ್ಲಷ್ಟೇ ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. ಆಗಸ್ಟ್ 29ರಂದು ಶರತ್ ಅವರು ಅಧಿಕಾರ ಸ್ವೀಕರಿಸಿದ್ದರು. ಮೈಸೂರಿಗೆ ವರ್ಗವಾಗುವ ಮುನ್ನ ಕಲಬುರಗಿ ಜಿಲ್ಲಾಧಿಕಾರಿಯಾಗಿ ಶರತ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಒಂದೇ ತಿಂಗಳ ಒಳಗೆ ಶರತ್ ಅವರ ಎತ್ತಂಗಡಿಯಾಗಿದೆ.












