ಸುವರ್ಣಸೌಧಕ್ಕೆ ಶಕ್ತಿ ತುಂಬಿದ ಯಡಿಯೂರಪ್ಪ;ಶೀಘ್ರದಲ್ಲೇ ಬೆಳಗಾವಿಗೆ ಪ್ರಮುಖ ಕಚೇರಿಗಳು ಸ್ಥಳಾಂತರ

ಬೆಂಗಳೂರು: ಪ್ರಮುಖ ಕೆಲ ಸರ್ಕಾರಿ ಕಚೇರಿಗಳನ್ನು ವಿಧಾನಸೌಧದಿಂದ ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ಒಂದು ತಿಂಗಳ ಅವಧಿಯಲ್ಲಿ ಕೆಲವು ಪ್ರಮುಖ ಸರ್ಕಾರಿ ಕಚೇರಿಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ವರ್ಗಾಯಿಸುವಂತೆ ಅಧಿಕಾರಿಗಳಿಗೆ ಬಿಎಸ್‌ವೈ ಸೂಚಿಸಿದ್ದಾರೆ. ಇಂದು ಬಿಎಸ್‌ವೈ ನೇತೃತ್ವದಲ್ಲಿ ನಡೆದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

promotions

Read More Articles