ಕಾಂಕ್ರೀಟ್ ರಸ್ತೆ ಮತ್ತು ಚರಂಡಿಗಳ ಕಾಮಗಾರಿಗೆ ಶಾಸಕರಾದ ಎಲ್. ನಾಗೇಂದ್ರ ಗುದ್ದಲಿ ಪೂಜೆ

ಮೈಸೂರು: ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ನಗರದ ವಾರ್ಡ್ ನಂಬರ 25 ರಲ್ಲಿ ತಿಲಕ್ ನಗರ ಗಂಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಸಮಾಜ ಕಲ್ಯಾಣ ಇಲಾಖೆಯ 50.00 ಲಕ್ಷ ರೂ. ಅನುದಾನದ ಕಾಂಕ್ರೀಟ್ ರಸ್ತೆ ಮತ್ತು ಚರಂಡಿಗಳ ಕಾಮಗಾರಿಗೆ ಶಾಸಕರಾದ ಎಲ್. ನಾಗೇಂದ್ರ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯ ರಂಗಸ್ವಾಮಿ, ಕೆ.ಆರ್.ಐ.ಡಿ.ಎಲ್ ಸಂಸ್ಥೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ತಿಪ್ಪಾರೆಡ್ಡಿ, ಚಾಮರಾಜ ವಿಧಾನಸಭಾ ಕ್ಷೇತ್ರದ ಭಾಜಪಾ ಅಧ್ಯಕ್ಷ ಸೋಮಶೇಖರರಾಜು, ಪ್ರಧಾನ ಕಾರ್ಯದರ್ಶಿ ಪುನೀತ್, ಮಹಿಳಾ ಮೋರ್ಚಾ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಅಧ್ಯಕ್ಷೆ ತನುಜಾ ಮಹೇಶ್, ರಾಜು ದಾಸ್ ಪ್ರಕಾಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

promotions

promotions

Read More Articles