ಸರ್ಕಾರದ ಸೌಲಭ್ಯಗಳನ್ನು ವಿಕಲಚೇತನರು ಸರಿಯಾಗಿ ಉಪಯೋಗಿಸಲು ಕರೆ; ಮಹಾಂತೇಶ ಹೊಂಗಲ್
- 18 Dec 2023 , 1:40 AM
- Belagavi
- 93
ಬೆಳಗಾವಿ: ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಮತ್ತು ಬೆಳಗಾವಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘ ಸಂಯುಕ್ತ ಆಶ್ರಯದಲ್ಲಿ ಇಂದು ಆಟೋನಗರದಲ್ಲಿ ಮಹಾತ್ಮ ಗಾಂಧಿಜೀಯವರ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷ ಮಹಾಂತೇಶ ಹೊಂಗಲ್ ಸರ್ಕಾರದ ಇಲಾಖೆಗಳ ಅಡಿಯಲ್ಲಿ ಹಲವಾರು ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ ಆದರೆ ಅದರ ಬಗ್ಗೆ ಸಂಪೂರ್ಣವಾದ ಮಾಹಿತಿ ವಿಕಲಚೇತನರಿಗೆ ಇಲ್ಲಾ ಎಂದು ವಿಷಾದ ವ್ಯಕ್ತಪಡಿಸಿದರು.

ಆದ್ದರಿಂದ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಮತ್ತು ಬೆಳಗಾವಿ ಜಿಲ್ಲಾ ವಿಕಲಚೇತನರ ಕ್ರೀಡಾ ಸಂಘದಿಂದ ಪ್ರತಿ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳ ಬಗ್ಗೆ ತಿಳಿಸಿ ಅವರಲ್ಲಿರುವ ಕೀಳರಿಮೆ ಭಾವನೆಯನ್ನು ಹೋಗಲಾಡಿಸುವುದರ ಜೊತೆಗೆ ಅವರ ಪ್ರತಿಭೆಯನ್ನು ಗುರುತಿಸಿ ಅವರನ್ನು ರಾಜ್ಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವ ಮಹತ್ತರ ಕಾರ್ಯ ಮಾಡುತ್ತಿದ್ದೇವೆ ಇದಕ್ಕೆ ಸಾರ್ವಜನಿಕರು ಕೈ ಜೋಡಿಸ ಬೇಕಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.










