ಡಿಕೆಶಿ ಸಹೋದರರಿಗೆ ಸಿಬಿಐ ಶಾಕ್; ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ

ಬೆಂಗಳೂರು: ಅಕ್ರಮ ಹಣದ ವಿಷಯಕ್ಕೆ ಸಂಬಂದಿಸಿದಂತೆ ಇಂದು ಬೆಳ್ಳಂ ಬೆಳಿಗ್ಗೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

promotions

ಐಟಿ ಮತ್ತು ಇಡಿ ಅಧಿಕಾರಿಗಳ ನಂತರ ಸಿಬಿಐ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರದ ಮನೆ ಸೇರಿದಂತೆ ಕನಕಪುರದಲ್ಲಿ ಕೂಡಾ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

promotions

ಸಹೋದರ ಸಂಸದ ಡಿ ಕೆ ಸುರೇಶ್ ಅವರ ಮನೆಗೂ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

Read More Articles