ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ; ಮಾಜಿ ಸಿಎಂ. ಸಿದ್ಧರಾಮಯ್ಯ ವಾಗ್ದಾಳಿ

ಬೆಂಗಳೂರು : ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿ ಸುಮಾರು 50 ಲಕ್ಷ ರೂಗಳನ್ನು ಪತ್ತೆ ಮಾಡಿರುವುದಾಗಿ ಮೂಲಗಳಿಂದ ಮಾಹಿತಿ ನೀಡಿವೆ.

promotions

ಹಿಂದೆ ಕೂಡ ಇಡೀ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿ.ಕೆ. ಶಿವಕುಮಾರ್ ಮನೆ ಜತೆಗೆ ಅವರ ಸಹೋದರಾದ ಸಂಸದ ಡಿ.ಕೆ. ಸುರೇಶ್ ಮನೆ ಮೇಲೂ ದಾಳಿ ನಡೆಸಲಾಗಿದೆ. ಅವರಿಗೆ ಸಂಬಂಧಿಸಿದ ಕರ್ನಾಟಕದ 9 ಕಡೆ , ದೆಹಲಿಯ 4 ಕಡೆ ಹಾಗೂ ಮುಂಬೈನ ಕಡೆ ಅವರಿಗೆ ಸಂಬಂಧಿಸಿದ ನಿವಾಸ , ಸಂಸ್ಥೆ , ಕಟ್ಟಡಗಳ ಮೇಲೆ ಸಿಬಿಐ ದಾಳಿ ನಡೆದಿದ್ದು , ದಾಖಲೆಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

promotions

ಈ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆ ಶಿವಕುಮಾರ್‌ ಬೆಂಬಲಿಗರು ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಉಪಚುನಾವಣೆ ವೇಳೆ ಪ್ರಧಾನಿ ಮೋದಿ ದುಷ್ಟ ರಾಜಕಾರಣವನ್ನು ಮಾಡುತ್ತಿದ್ದಾರೆ ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ಹೊರ ಬಿದ್ದ ತಕ್ಷಣ ಇದರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ, ಡಿಕೆ ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.

ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ. ಚುನಾವಣೆ ಸಂದರ್ಭದಲ್ಲಿ ಡಿಸ್ಟರ್ಬ್ ಮಾಡಬೇಕು ಎಂದು ದಾಳಿ ನಡೆಸಲಾಗಿದೆ ಎಂದು ವಾಗ್ದಾಳಿ ನಡೆಸಿದರು.

Read More Articles