ವಿದ್ಯಾಗಮ ಯೋಜನೆ ತಾತ್ಕಾಲಿಕ ಸ್ಥಗಿತ, ಶಿಕ್ಷಣ ಸಚಿವ ಸುರೇಶ ಕುಮಾರ

ಬೆಂಗಳೂರು: ಕೊರೋನಾ ರಣಕೇಕೆಯಿಂದ ದೇಶದೆಲ್ಲೆಡೆ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ಹಿನ್ನಲೆಯಿಂದ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ವಿದ್ಯಾಗಮ ಯೋಜನೆಯನ್ನು ಅನುಷ್ಠಾನಕ್ಕೆ ತಂದು ಕಲಿಕೆಯನ್ನು ಆರಂಭಿಸಬೇಕು ಎನ್ನುವ ತವಕದಲ್ಲಿರುವಾಗ ಇನ್ನೊಂದು ಕಡೆ ಈ ಯೋಜನೆಯಿಂದಾಗಿ ಶಿಕ್ಷಕರು ಹಾಗೂ ಪಾಲಕರಲ್ಲಿ ಕೊರೋನಾಂತಕ ಹೆಚ್ಚಾಗುತ್ತಿದೆ.

promotions

ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಕೂಗು ರಾಜ್ಯಾದ್ಯಂತ ಕೇಳಿಬರುತ್ತಿದೆ. ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾಗಮಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ಹೇಳಿದ್ದಾರೆ. ಸಚಿವರು ಮೊದಲು ಯಾವುದೇ ಕಾರಣಕ್ಕೂ ವಿದ್ಯಾಗಮವನ್ನು ನಿಲ್ಲಿಸುವುದಿಲ್ಲ ಎಂದಿದ್ದರು. ಇದಾದ ಮರುದಿನವೇ ವಿದ್ಯಾಗಮಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ್ದಾರೆ.

promotions

ಈ ಕುರಿತು ಇಂದು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿದೆ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರರ ಹಾಗೂ ಅದರ ಸಮರ್ಪಕಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಬರೆದುಕೊಂಟಿದ್ದಾರೆ.

Read More Articles