ಆರ್‌ಆರ್ ನಗರ ಉಪಚುನಾವಣೆಗೆ ಮೂರು ಪಕ್ಷಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ ಆರ್ ಆರ್ ನಗರದ ಉಪಚುನಾವಣೆಯ ಕಾವು ರಂಗೇರುತ್ತಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದಿಂದ ಮುನಿರತ್ನ, ಕಾಂಗ್ರೇಸ್ ಪಕ್ಷದಿಂದ ಕುಸುಮಾ ಎಚ್ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣ ಮೂರ್ತಿ ವಿ ಅವರು ಬಿಬಿಎಂಪಿ ಕಛೇರಿಯಲ್ಲಿ ತಮ್ಮ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಕುಸುಮಾರವರು ಜೋತಿಷ್ಯ ಸಲಹೆ ಮೆರೆಗೆ ಬುಧವಾರ ತಾರಾಬಲ ಇಲ್ಲವೆಂಬ ಕಾರಣದಿಂದ ಅವರು ಮಂಗಳವಾರವೇ ನಾಮ ಪತ್ರ ಸಲ್ಲಿಸಿದರು.

promotions

ಇಂದು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗೂಡಿ ಅಧಿಕೃತವಾಗಿ ನಾಮ ಪತ್ರ ಸಲ್ಲಿಸಿದರು. ಬಿಜೆಪಿ ಪಕ್ಷದ ಅಭ್ಯರ್ಥಿ ಮುನಿರತ್ನ ಅವರಿಗೆ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಹಾಗೂ ಸಚಿವ ಆರ್. ಅಶೋಕ ಸಾಥ ನೀಡಿದರೆ ಜೆಡಿಎಸ್ ಪಕ್ಷದ ಅಭ್ಯರ್ಥಿ ಕೃಷ್ಣಮೂರ್ತಿ ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸಾಥ್ ನೀಡಿದರು.

promotions

ಇದೇ ಶುಕ್ರವಾರ 16 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ 3 ಕ್ಕೆ ಮತದಾನ ನಡೆಯಲಿದ್ದು, ನಂತರ ನ.10 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

Read More Articles