ಹಿರಿಯ ನಟ, ಬರಹಗಾರ ಕೃಷ್ಣಮೂರ್ತಿ ನಾಡಿಗ್ ಇನ್ನಿಲ್ಲ

ಬೆಂಗಳೂರು: ಹಿರಿಯ ನಟ, ಕಲಾವಿದ, ಬರಹಗಾರ ಕೃಷ್ಣ ನಾಡಿಗ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸುಮಾರು 5 ದಶಕಗಳಿಗಿಂತ ಹೆಚ್ಚು ಕಾಲ ನಟನಾ ರಂಗದಲ್ಲಿ ತಮನ್ನು ತಾವು ತೊಡಗಿಸಿಕೊಂಡಿದ್ದ ಕೃಷ್ಣಮೂರ್ತಿ ನಾಡಿಗ್ ಕೇವಲ ನಟ, ಕಲಾವಿದ ಅಷ್ಟೇ ಆಗಿರದೆ ಲೇಖಕರಾಗಿಯೂ ಗುರುತಿಸಿಕೊಂಡಿದ್ದರು. ನಿನ್ನೆ ಸಂಜೆ ಧಾರಾವಾಹಿಯ ಶೂಟಿಂಗ್ ನಡೆಯುತ್ತಿರುವಾಗ ಕೃಷ್ಣಮೂರ್ತಿ ನಾಡಿಗ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೇ ಅವರು ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.

promotions

promotions

Read More Articles