ಶತಮಾನೋತ್ಸವ ಸಂಭ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯ, ಘಟಿಕೋತ್ಸವ ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

  • 15 Jan 2024 , 12:19 AM
  • Mysuru
  • 94

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಮೈಸೂರು ವಿಶ್ವವಿದ್ಯಾಲಯ ರಾಜ್ಯದಲ್ಲಿ ತನ್ನದೇಯಾದ ಹೆಗ್ಗುರುತು ಮೂಡಿಸಿದೆ. ಇದು ಭಾರತ ದೇಶದ ಆರನೇಯ ಮತ್ತು ಕರ್ನಾಟಕ ರಾಜ್ಯದಲ್ಲಿ ಸ್ಥಾಪನೆಗೊಂಡ ಮೊದಲ ವಿಶ್ವವಿದ್ಯಾಲಯ ಇದಾಗಿದ್ದು ಜುಲೈ 27, 1916 ರಲ್ಲಿ ಸ್ಥಾಪನೆಗೊಂಡ ಈ ವಿವಿಗೆ ಶತಮಾನೋತ್ಸವದ ಸಂಭ್ರಮ. ಈ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯದ 100 ವರ್ಷ ಸಂಭ್ರದ ಘಟಿಕೋತ್ಸವ ಆಚರಣೆಗೆ ಸಿದ್ದವಾಗಿದ್ದು ಇದನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭಾಷಣ ಮಾಡಲಿದ್ದಾರೆ.

promotions

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಗಳ ಕುಲಾಧಿತಿಗಳು ಹಾಗೂ ರಾಜ್ಯಪಾಲ ವಜೂಭಾಯಿ ವಾಲಾ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.

promotions

Read More Articles