ಉತ್ತರ ಮತ ಕ್ಷೇತ್ರದ ಜನರ ಸಮಸ್ಯೆಗಳನ್ನು ಸಚಿವ ಆರ್. ಅಶೋಕ ಗಮನಕ್ಕೆ ತಂದ್ರು ಶಾಸಕ ಬೆನಕೆ

ಬೆಳಗಾವಿ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಕಂದಾಯ ಸಚಿವರಾದ ಆರ್.ಅಶೋಕ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯ ಅತಿವೃಷ್ಟಿ/ ಪ್ರವಾಹ ಸ್ಥಿತಿಗತಿ, ಕೈಗೊಂಡ ಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಹಲವು ಮನೆಗಳು ಬಿದ್ದಿವೆ ಆ ಮನೆ ಕಳೆದುಕೊಂಡವಾರ ಹೆಸರು ಪಟ್ಟಿಯಲ್ಲಿ ಇಲ್ಲ ಎಂದು ಶಾಸಕ ಅನಿಲ್ ಬೆನಕೆ ಸಚಿವರ ಗಮನಕ್ಕೆ ತಂದರು. ಕಳೆದ ಮಳೆಗಾಲದಲ್ಲಿ ಬಿದ್ದ ಮನೆಗಳನ್ನು ಕಟ್ಟಲು 2ನೇ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಸಚಿವರನ್ನು ಒತ್ತಾಯಿಸಿದರು.

promotions

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ವಿಧಾನ ಸಭೆ ಉಪ ಸಭಾಧ್ಯಕ್ಷ ಆನಂದ ಮಾಮನಿ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

promotions

Read More Articles