ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡುವುದು ನನ್ನ ಜವಾಬ್ದಾರಿ; ಸಚಿವೆ ಶಶಿಕಲಾ ಜೊಲ್ಲೆ
- 15 Jan 2024 , 2:21 AM
- Vijayapur
- 150
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ತಾರಾಪೂರ ಗ್ರಾಮದ ನೆರೆಪೀಡಿತ ಪ್ರದೇಶಗಳಿಗೆ ಹಾಗೂ ಸಂತ್ರಸ್ತರ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ ಮನೆ ಕಳೆದುಕೊಂಡವರಿಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಶಾಶ್ವತವಾಗಿ ಪರಿಹಾರ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿ, ನಾನು ಈಗಷ್ಟೇ ಕೊರೊನಾ ಸೋಂಕಿನಿಂದ ಗುಣಮುಖಳಾಗಿ ವೈದ್ಯರ ಅನುಮತಿ ಸಲಹೆ ಪಡೆದು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಅದರಲ್ಲಿ ಅಲ್ಪ್ ಸ್ವಲ್ಪ್ ವ್ಯತ್ಯಾಸ ಆಗಿರಬಹುದು ಆದರೆ ನಿರಂತರವಾಗಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿಕೊಂಡು, ನೆರೆಹಾವಳಿ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೆ. ನನ್ನ ಜಿಲ್ಲೆಯ ಜನತೆ ಬಗ್ಗೆ ನನಗೆ ಅತೀವ ಪ್ರೀತಿ, ವಿಶ್ವಾಸವಿದೆ. ಹೀಗಾಗಿ ಎಲ್ಲಾ ಸಂತ್ರಸ್ತರಿಗೆ ನ್ಯಾಯ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ವಿಜಯಪುರದ ಕೆಲ ನೆರೆ ಪೀಡಿತ ಗ್ರಾಮಗಳಿಗೆ ಈಗಾಗಲೇ ಭೇಟಿ ಕೊಟ್ಟಿದ್ದೇನೆ. ಆದರೆ ಕೆಲವೆಡೆ ಭೇಟಿ ಕೊಡಲು ಸಾಧ್ಯವಾಗಿಲ್ಲ. ಹೀಗಾಗಿ ಸಂತ್ರಸ್ತರು ಯಾರೂ ಕೂಡ ಧೈರ್ಯ ಕಳೆದುಕೊಳ್ಳಬೇಡಿ. ನಿಮ್ಮ ಜತೆ ನಾನಿದ್ದೇನೆ. ನಿಮಗೆ ಪರಿಹಾರ ದೊರಕಿಸಿಕೊಡುವುದು ನನ್ನ ಜವಾಬ್ದಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.












